ಚಳ್ಳಕೆರೆ: ಪ್ರತಿಯೊಬ್ಬರು ದಿನನಿತ್ಯ ತಮ್ಮ ಮನೆಗಳಲ್ಲಿ ಗೃಹ ಬಳಕೆ ವಸ್ತುಗಳ ನಂತರ ಹೊರ ಬರುವ ತ್ಯಾಜ್ಯವಸ್ತುಗಳು ಕಸವನ್ನು ಸ್ವಚ್ಛತಾ ವಾಹನಕ್ಕೆ ಹಾಕಿ ಸ್ವಚ್ಛ ಗ್ರಾಮ ಮಾಡುವ ಜೊತೆಗೆ ಪರಿಸರ ಸಂರಕ್ಷಣೆ ಸಾರ್ವಜನಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿ ಆಗುತ್ತದೆ ಎಂದು ಶಾಸಕ ಟಿ ರಘುಮೂರ್ತಿ ಹೇಳಿದರು.

ತಾಲೂಕಿನ ಸಾಣಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಗ್ಗೆರೆಯ ಪ್ರಕಾಶ್ ಸ್ಪಾಂಜ್ ಐರನ್ ಅಂಡ್ ಪವರ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿ ಸಿ.ಎಸ್.ಆರ್ ಅಡಿಯಲ್ಲಿ ಸ್ವಚ್ಛತಾ ವಾಹನವನ್ನು ಗ್ರಾಮ ಪಂಚಾಯಿತಿಗೆ ಅಧಿಕೃತವಾಗಿ ಹಸ್ತಾಂತರಿಸಲು ಆಯೋಜಿಸಿದ್ದ ಕಾರ್ಯಕ್ರಮವನ್ನು ಸ್ವಚ್ಛತಾ ವಾಹನ ಹಸ್ತಾತರಿಸಿ ಮಾತನಾಡಿದ ಅವರು



ಸ್ವಚ್ಛತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸ್ವಚ್ಛತಾ ವಾಹನ ನೀಡಲಾಗಿದ್ದು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು
ಸ್ವಚ್ಛತಾ ವಾಹನವನ್ನು ಹೊಸದಾಗಿ ಬಳಸಿಕೊಂಡು ನಂತರ ನಿರ್ವಹಣೆ ಮಾಡಲು ಆಗುತ್ತಿಲ್ಲ ಎಂಬ ಕಾರಣ ನೀಡಿ ಕಡೆಗಣಿಸಬಾರದು. ಪಂಚಾಯಿತಿಗೆ ಒಳಪಡುವ ಪ್ರತಿಯೊಂದು ಹಳ್ಳಿಗೂ ಈ ವಾಹನ ಸಂಚರಿಸಬೇಕು. ಗ್ರಾಮದಲ್ಲಿ ದಿನನಿತ್ಯ ಮನೆಮನೆಗಳಿಂದ ಹೊರಬರುವ ತ್ಯಾಜ್ಯವನ್ನು ಸ್ವಚ್ಛತಾ ವಾಹನಕ್ಕೆ ನೀಡುವ ಮೂಲಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು.ಸ್ವಚ್ಛತೆ ಕೇವಲ ಸರ್ಕಾರದ ಜವಾಬ್ದಾರಿ ಅಲ್ಲ, ಜನರ ಸಹಭಾಗಿತ್ವವೂ ಸಹಕಾರ ಅಗತ್ಯ ಎಂದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಮಾತನಾಡಿ, ಗ್ರಾಮಗಳಲ್ಲಿ ದಿನನಿತ್ಯ ಸಂಗ್ರಹವಾಗುವ ಗೃಹಬಳಕೆಯ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡುವುದು ಅತ್ಯಂತ ಅಗತ್ಯ. ಪಂಚಾಯಿತಿ ಹಾಗೂ ಗ್ರಾಮಸ್ಥರ ಸಹಕಾರದಿಂದ ಮಾತ್ರ ಸ್ವಚ್ಛತೆ ಸಾಧ್ಯವಾಗುತ್ತದೆ. ಇದಕ್ಕೋಸ್ಕರ ಪ್ರತಿ ಹಳ್ಳಿಗೂ ಈ ಸ್ವಚ್ಛತಾ ವಾಹನವನ್ನು ಕಳುಹಿಸಿ ಕಸ ಸಂಗ್ರಹ ಮಾಡಲಾಗುವುದು. ಇದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಪ್ರಕಾಶ್ ಸ್ಪಾಂಜ್ ಐರನ್ ಅಂಡ್ ಪವರ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಅಧಿಕಾರಿಗಳಾದ ರುದ್ರಪ್ಪ ಮಾತನಾಡಿ, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಕೈಗಾರಿಕಾ ಸಂಸ್ಥೆಗಳು ಸಹ ಕೈಜೋಡಿಸಬೇಕು ಎಂಬ ಉದ್ದೇಶದಿಂದ ಈ ವಾಹನವನ್ನು ನೀಡಲಾಗಿದೆ. ಮುಂದಿನ ದಿನಗಳಲ್ಲಿಯೂ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗಳಾದ ಶಶಿಧರ, ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿಗಳಾದ ರಮೇಶ್, ಪ್ರಕಾಶ್ ಸ್ಪಾಂಜ್ ಐರನ್ ಅಂಡ್ ಪವರ್ ಪ್ರವೆಟ್ ಲಿಮಿಟೆಡ್ ನ ಅಧಿಕಾರಿಗಳಾದ ಮಂಜುನಾಥ್, ರುದ್ರಪ್ಪ, ಗ್ರಾಮ ಪಂಚಾಯಿತಿ ಸದಸ್ಯರುಗಳು, ಮುಖಂಡರುಗಳಾದ ಪ್ರಸನ್ನಕುಮಾರ್, ನಾಗರಾಜ್, ದರ್ಶನ್, ವೀರಣ್ಣ, ಲಕ್ಷ್ಮಣ, ಮಹಾಲಿಂಗಗೌಡ, ನಾಗರಾಜ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.