ಮಧ್ಯ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ನಾಯಕನಹಟ್ಟಿ ನಲ್ಲಿ ಮಾರ್ಚ್ 6ರಂದು ನಡೆಯಲಿರುವ ಜಾತ್ರೆ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
ಜಾತ್ರೆಯ ದಿನ ವಾಹನಗಳ ಸಂಚಾರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಆಟೋ ರಿಕ್ಷಾಗಳಿಗೆ ವಿಶೇಷ ನಿಬಂಧನೆಗಳನ್ನು ಹೇರಲಾಗಿದೆ. ಎಲ್ಲಾ ಆಟೋಗಳಿಗೆ ಕ್ರಮಬದ್ಧವಾಗಿ ನಂಬರ್ ನೀಡಲಾಗಿದ್ದು, ಅವುಗಳನ್ನು ಪೊಲೀಸ್ ಠಾಣೆಯಲ್ಲಿ ನೋಂದಣಿ ಮಾಡಲಾಗಿದೆ. ಪರವಾನಗಿ ಇಲ್ಲದೆ ಸಂಚರಿಸುವುದು, ಅತಿಯಾದ ಪ್ರಯಾಣಿಕರನ್ನು ಕೂರಿಸುವುದು, ಶಾಲಾ ಮಕ್ಕಳನ್ನು ನಿಯಮಬಾಹಿರವಾಗಿ ಸಾಗಿಸುವುದು ಸೇರಿದಂತೆ ವಿವಿಧ ಉಲ್ಲಂಘನೆಗಳ ವಿರುದ್ಧ ವಿಶೇಷ ತಪಾಸಣೆ ನಡೆಸಲಾಗಿದೆ. ನಿಯಮ ಉಲ್ಲಂಘಿಸಿದ ಆಟೋ ಚಾಲಕರಿಗೆ ದಂಡ ವಿಧಿಸಿ ಕಠಿಣ ಎಚ್ಚರಿಕೆ ನೀಡಲಾಗಿದೆ.










ಸಾರ್ವಜನಿಕರ ಸುರಕ್ಷತೆ ಪ್ರಮುಖವಾಗಿರುವುದರಿಂದ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನಾಯಕನಹಟ್ಟಿ ಪಿಎಸ್ಐ ಪಾಂಡುರಂಗಪ್ಪ ಸೂಚಿಸಿದರು.
ಜಾತ್ರೆ ಸಂದರ್ಭದಲ್ಲಿ ಭಕ್ತಾದಿಗಳಿಂದ ಬೇಕಾಬಿಟ್ಟಿಯಾಗಿ ಹಣ ವಸೂಲಿ ಮಾಡದೆ, ತಲಾ ಒಬ್ಬರಿಗೆ ರೂ.10 ಮಾತ್ರ ದರ ವಸೂಲಿ ಮಾಡಬೇಕು ಹಾಗೂ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಳಕು ವೃತ್ತ ನಿರೀಕ್ಷಕರಾದ ಹನುಮಂತಪ್ಪ ಶಿರೇಹಳ್ಳಿ ಆಟೋ ಚಾಲಕರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ನಾಯಕನಹಟ್ಟಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಶ್ರೀಹರಿ, ಮಹೇಶ್, ವೀರೇಶ್, ರಾಜು, ದೇವರಾಜ್ ಕೋಟೆ, ಆಟೋ ಚಾಲಕರು, ಮಾಲೀಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.