February 27, 2026
IMG-20260227-WA0279.jpg

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಚೌಳಕೆರೆ ಗ್ರಾಮದ ದಾವಣಗೆರೆ ಓಬಯ್ಯ ಮತ್ತು ಸೂರಮ್ಮ ದಂಪತಿಯ ಮೂರನೇ ಸುಪುತ್ರರಾದ ಡಿ.ಓ. ನಾಗರಾಜ ಅವರಿಗೆ ಕನ್ನಡ ವಿಶ್ವವಿದ್ಯಾಲಯದ ೩೪ನೇ ನುಡಿಹಬ್ಬ ಕಾರ್ಯಕ್ರಮದಲ್ಲಿ ಕುಲಾಧಿಪತಿಗಳಾದ ರಾಜ್ಯಪಾಲರು ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು

.
ಡಿ.ಓ. ನಾಗರಾಜ ಅವರು ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಶಾಲೆಯಲ್ಲಿ ಹಾಗೂ ಪ್ರೌಢ ಶಿಕ್ಷಣವನ್ನು ಶ್ರೀ ವೀರಭದ್ರೇಶ್ವರ ಪ್ರೌಢಶಾಲೆಯಲ್ಲಿ ಪೂರ್ಣಗೊಳಿಸಿದರು. ಪದವಿ ಶಿಕ್ಷಣವನ್ನು ಚಳ್ಳಕೆರೆಯಲ್ಲಿ ಹಾಗೂ ಸ್ನಾತಕೋತ್ತರ ಪದವಿಯನ್ನು ಕುವೆಂಪು ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ವಿಷಯದಲ್ಲಿ ಪಡೆದಿದ್ದಾರೆ. ನಂತರ ರಾಜ್ಯಶಾಸ್ತ್ರ ವಿಷಯದಲ್ಲಿ ಕೆ-ಸೆಟ್ ಅರ್ಹತೆ ಪಡೆದ ಅವರು ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾದ ಕಿಚಡಿ ಚೆನ್ನಪ್ಪ ಅವರ ಮಾರ್ಗದರ್ಶನದಲ್ಲಿ “ಇ-ಆಡಳಿತ ಮತ್ತು ಗ್ರಾಮೀಣ ಅಭಿವೃದ್ಧಿ” ವಿಷಯದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಗಳಿಸಿದ್ದಾರೆ.
ಪ್ರಸ್ತುತ ಅವರು ಹೊಸಪೇಟೆ ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸಮಾಜ ವಿಜ್ಞಾನ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರ ಈ ಶೈಕ್ಷಣಿಕ ಸಾಧನೆಗೆ ತಂದೆ-ತಾಯಿ, ಬಂಧುಬಳಗ ಹಾಗೂ ಸ್ನೇಹಿತರು ಅಪಾರ ಹರ್ಷ ವ್ಯಕ್ತಪಡಿಸಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading