ಚಿತ್ರದುರ್ಗ: ಯುವ ಜನತೆಯನ್ನು ಮಾದಕ ವ್ಯಸನಗಳಿಂದ ದೂರವಿಟ್ಟು ಆರೋಗ್ಯಕರ ಹಾಗೂ ಸಧೃಡ ಜೀವನ ಶೈಲಿಯತ್ತ ಪ್ರೇರೇಪಿಸುವ ಉದ್ದೇಶದಿಂದ ಚಿತ್ರದುರ್ಗ ಜಿಲ್ಲಾ ಪೊಲೀಸ್ ವತಿಯಿಂದ ದಿನಾಂಕ 01.03.2026 ರಂದು “ಜಾಗೃತ ರನ್ 2.0” ಹೆಸರಿನ 5 ಕಿಲೋಮೀಟರ್ ಮ್ಯಾರಥಾನ್ ಓಟವನ್ನು ಆಯೋಜಿಸಲಾಗಿದೆ.
ಜಿಮ್, ನಡಿಗೆ, ಓಟ, ಯೋಗ, ಧ್ಯಾನ, ದೈಹಿಕ ವ್ಯಾಯಾಮ ಸೇರಿದಂತೆ ವಿವಿಧ ಆರೋಗ್ಯಕರ ಚಟುವಟಿಕೆಗಳಲ್ಲಿ ಯುವ ಸಮುದಾಯ ತೊಡಗಿಸಿಕೊಳ್ಳುವಂತೆ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಮ್ಯಾರಥಾನ್‌ವು ಬೆಳಗ್ಗೆ 7.00 ಗಂಟೆಗೆ ಚಿತ್ರದುರ್ಗ ನಗರದ ಡಿಎಆರ್ ಮೈದಾನದಿಂದ ಪ್ರಾರಂಭವಾಗಲಿದೆ. ಅಲ್ಲಿಂದ ವಾಸವಿ ಲ್ಯಾಬ್ ಮುಂಭಾಗದ ಮೂಲಕ ಬಿ.ಡಿ. ರಸ್ತೆಯ ಮೂಲಕ ಚಳ್ಳಕೆರೆ ಸರ್ಕಲ್ (ಯು-ಟರ್ನ್), ಮದಕರಿ ಸರ್ಕಲ್, ಅಂಬೇಡ್ಕರ್ ವೃತ್ತ, ಹೆಡ್ ಪೋಸ್ಟ್ ಆಫೀಸ್ ಹತ್ತಿರ (ಯು-ಟರ್ನ್), ಗಾಂಧಿ ವೃತ್ತ ಪ್ರವಾಸಿ ಮಂದಿರದ ಎಡಭಾಗದಿಂದ ಡಿಸಿ ವೃತ್ತದ ಮೂಲಕ ಮತ್ತೆ ಡಿಎಆರ್ ಮೈದಾನದಲ್ಲಿ ಮುಕ್ತಾಯಗೊಳ್ಳಲಿದೆ.
ಈ 5K ಮ್ಯಾರಥಾನ್‌ನಲ್ಲಿ ಭಾಗವಹಿಸುವ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಯುವಕ-ಯುವತಿಯರಿಗೆ ಪ್ರಥಮ ಬಹುಮಾನ ರೂ.5,000/-, ದ್ವಿತೀಯ ಬಹುಮಾನ ರೂ.3,000/-, ತೃತೀಯ ಬಹುಮಾನ ರೂ.2,000/- ಜೊತೆಗೆ ಮೆಡಲ್ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಗುತ್ತದೆ.
ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿರುವ ಈ ಜಾಗೃತಿ ಓಟದಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ಯುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮನವಿ ಮಾಡಲಾಗಿದೆ.
ವಿಶೇಷ ಸೂಚನೆ: ಮ್ಯಾರಥಾನ್‌ನಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ತಿಂಡಿ ವ್ಯವಸ್ಥೆ ಮಾಡಲಾಗಿದೆ.
About The Author
Discover more from JANADHWANI NEWS
Subscribe to get the latest posts sent to your email.