March 17, 2026
IMG-20250327-WA0167.jpg

ನಾಯಕನಹಟ್ಟಿ : ಸತತ 2ನೇ ಬಾರಿಗೆ ಮುಖ್ಯಮಂತ್ರಿ ಪದಕಕ್ಕೆ ತಳುಕು ಪೊಲೀಸ್ ಠಾಣೆಯ ಪಿಎಸ್ಐ ಕೆ ಶಿವಕುಮಾರ್ ಆಯ್ಕೆಯಾಗಿರುತ್ತಾರೆ.

ದಿನಾಂಕ: 02.04.2025 ರಂದು ಕೆಎಸ್‌ಆರ್‌ಪಿ ಕವಾಯತು ಮೈದಾನ,ಕೋರಮಂಗಲ, ಬೆಂಗಳೂರು ನಗರದಲ್ಲಿ ಪದಕ ಪ್ರಧಾನ ಸಮಾರಂಭದಲ್ಲಿ ತಳಕು ಪೊಲೀಸ್ ಠಾಣೆಯ ಪಿಎಸ್ಐ ಕೆ ಶಿವಕುಮಾರ್ ರವರಿಗೆ ಮುಖ್ಯಮಂತ್ರಿ ಪದಕವನ್ನು ಸ್ವೀಕರಿಸಲಿದ್ದಾರೆ.

ಕೆ ಶಿವಕುಮಾರ್ ರವರು ಚಾಮರಾಜನಗರ ಜಿಲ್ಲೆ, ಕೊಳ್ಳೇಗಾಲ ತಾಲ್ಲೂಕಿನ ದಣಿಗೆರೆ ಗ್ರಾಮದವರಾಗಿದ್ದು, ಚಿತ್ರದುರ್ಗ ಜಿಲ್ಲಾ
ಪೊಲೀಸ್ ಇಲಾಖೆಯಲ್ಲಿ ಇಂಥ ದಕ್ಷ ಅಧಿಕಾರಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದು ಹೆಮ್ಮೆಯ ವಿಚಾರ. ಆದ್ದರಿಂದ ಇಂತಹ
ಅಧಿಕಾರಿಗಳು ಚಿತ್ರದುರ್ಗ ಜಿಲ್ಲೆಗೆ ಒಳಪಡುವ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದರೆ, ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ರಾಜ್ಯಕ್ಕೆ ಮಾದರಿಯಾಗಲಿದೆ.ಪೊಲೀಸ್ ಇಲಾಖೆಯಲ್ಲಿ ನಿಷ್ಠೆ, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಸ್ವತ್ತಿನ ಕಳವು
ಪುಕರಣಗಳನ್ನು ಪತ್ತೆ ಮಾಡುವಲ್ಲಿ, ನೊಂದ ನಾಗರಿಕರಿಗೆ ನ್ಯಾಯ ದೊರೆಕಿಸಿಕೊಂಡುವಲ್ಲಿ, ಮಿಂಚಿನ ವೇಗದಲ್ಲಿ ಯಶಸ್ವಿಯಾಗಿದ್ದಾರೆ.
ಇಲಾಖೆಯ ಘನತೆ, ಗೌರವವನ್ನು ಹೆಚ್ಚಿಸಲು
ಕಾರಣಿಕರ್ತರಾಗಿರುತ್ತಾರೆ. ಆದ್ದರಿಂದ ಜಿಲ್ಲೆಯ ಎಲ್ಲಾ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಲೆಂದು ಸಾರ್ವಜನಿಕರು ಆಶಯ ವ್ಯಕ್ತಪಡಿಸಿದರು.

ನಾಯಕನಹಟ್ಟಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ದೇವರಾಜ್ ಹಾಗೂ ಸಿಬ್ಬಂದಿ ವರ್ಗದವರು ಪಿಎಸ್ಐ ಕೆ ಶಿವಕುಮಾರ್ ರವರರು ಮುಖ್ಯಮಂತ್ರಿ ಪದಕ್ಕೆ ಆಯ್ಕೆಯಾಗಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading