ಹೊಸದುರ್ಗ: ರಸ್ತೆಯಲ್ಲಿ ಅಡ್ಡ ಬಂದ ಕಾಡು ಹಂದಿಯನ್ನು ತಪ್ಪಿಸಲು ಹೋಗಿ ಬೈಕ್ ಚಾಲಕ ಮೃತಪಟ್ಟ ಘಟನೆ ತಾಲೂಕಿನ ಮಧುರೆ ಗ್ರಾಮದ ಕೆಇಬಿ ಬಳಿ ಗುರುವಾರ ರಾತ್ರಿ ನಡೆದಿದೆ.
ಮೃತ ವ್ಯಕ್ತಿಯನ್ನು ಮಧುರೆ ಗ್ರಾಮದ ಶಿಕ್ಷಕ ಉಮೇಶ್ (೪೫ )ಎಂದು ಗುರುತಿಸಲಾಗಿದೆ. ಬೈಕ್ ಹಿಂಬದಿಯಲ್ಲಿ ಕೂತಿದ್ದ ನಟರಾಜ್ ಗಾಯಗೊಂಡಿದ್ದಾರೆ.
ಮೃತ ಉಮೇಶ್ ಅವರಿಗೆ ಹುಷಾರಿಲ್ಲದ ಕಾರಣ ಗುರುವಾರ ರಾತ್ರಿ ೮.೩೦ ರ ಸುಮಾರಿಗೆ ವೈದ್ಯರಲ್ಲಿ ಚಿಕಿತ್ಸೆ ಪಡೆಯಲು ಹೊಸದುರ್ಗ ಪಟ್ಟಣಕ್ಕೆ ಮೊಟರ್ ಬೈಕ್ ನಲ್ಲಿ ಹೋಗುತ್ತಿದ್ದರು. ಮಧುರೆ ಗ್ರಾಮದಿಂದ ಮುಂದೆ ಇರುವ ಕೆಇಬಿ ಬಳಿ ಆಕಸ್ಮಿಕವಾಗಿ ರಸ್ತೆಗೆ ಅಡ್ಡಲಾಗಿ ಬಂದ ಕಾಡು ಹಂದಿಯನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಗಾಯಗೊಂಡಿದ್ದ ಉಮೇಶ್ ಹಾಗೂ ನಟರಾಜ್ ಅವರನ್ನು ಗ್ರಾಮಸ್ಥರು ಹೊಸದುರ್ಗ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ತೀರ್ವವಾಗಿ ಗಾಯಗೊಂಡಿದ್ದ ಉಮೇಶ್ ಅವರನ್ನು ಶಿವಮೊಗ್ಗ ಸುಬ್ಬಯ್ಯ ಆಸ್ಪತ್ರೆಗೆ ಕರೆದೊಯ್ದಾಗ ಪರೀಕ್ಷಿಸಿದ ಅಲ್ಲಿನ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದು ಮತ್ತೋರ್ವ ಗಾಯಾಳು ನಟರಾಜ್ ಹೊಸದುರ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಈ ಬಗ್ಗೆ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
About The Author
Discover more from JANADHWANI NEWS
Subscribe to get the latest posts sent to your email.