May 27, 2026
IMG-20260527-WA0198.jpg

ಚಳ್ಳಕೆರೆ ನಗರದ ಎಐಬಿಎಸ್ಪಿ (AIBSP) ಕಚೇರಿಯಲ್ಲಿ ಮಾತೇ ರಾಮಬಾಯಿ ಅಂಬೇಡ್ಕರ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಭಾವಪೂರ್ಣವಾಗಿ ಆಚರಣೆ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಐಬಿಎಸ್ಪಿ ಚಿತ್ರದುರ್ಗ ಜಿಲ್ಲಾಧ್ಯಕ್ಷರಾದ ಎನ್. ಪ್ರಕಾಶ್ ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಪ್ರಸ್ತಾವಿಕ ನುಡಿ ಹಾಗೂ ವಿಚಾರ ಮಂಡನೆಯನ್ನು ದಲಿತ ವಿಮೋಚನೆ ಮಾನವ ಹಕ್ಕುಗಳ ವೇದಿಕೆ ಕರ್ನಾಟಕದ ರಾಜ್ಯ ಸಂಚಾಲಕರಾದ ಭೀಮನಕೆರೆ ಶಿವಮೂರ್ತಿ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ರಾಮಬಾಯಿ ಅಂಬೇಡ್ಕರ್ ಅವರ ತ್ಯಾಗ, ಸೇವೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೋರಾಟಕ್ಕೆ ನೀಡಿದ ಬೆಂಬಲವನ್ನು ಸ್ಮರಿಸಲಾಯಿತು. ಸಮಾಜದಲ್ಲಿ ಸಮಾನತೆ, ಶಿಕ್ಷಣ ಮತ್ತು ಸಂಘಟನೆಯ ಮಹತ್ವದ ಕುರಿತು ಮುಖಂಡರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಎಐಬಿಎಸ್ಪಿ ತಾಲೂಕು ಅಧ್ಯಕ್ಷ ಜಯಣ್ಣ, ಮುಖಂಡರಾದ ಮಂಜುನಾಥ್, ಡಿಎಸ್ಎಸ್ ತಾಲೂಕು ಸಂಚಾಲಕ ಸತೀಶ್, ಯುವ ಮುಖಂಡ ತಿಪ್ಪೇಶ್ (ಲಕ್ಷ್ಮೀಪುರ), ಮಹಿಳಾ ಮುಖಂಡ ಶಿಲ್ಪಾ, ನಾಗೇಂದ್ರಪ್ಪ ಬೂದಿಹಳ್ಳಿ ಸೇರಿದಂತೆ ಹಲವರು ಭಾಗವಹಿಸಿದ್ದರು.
ಕೊನೆಯಲ್ಲಿ “ಜೈ ಭೀಮ್, ಜೈ ಕನ್ಶಿರಾಂ, ಜೈ ಕೃಷ್ಣಪ್ಪ ಜೀ” ಘೋಷಣೆಗಳೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading