May 27, 2026
file_000000005e5c72078d87d5a203b54351.png

ಚಿತ್ರದುರ್ಗ ಮೇ.27:
ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯದ ಜನರಿಗೆ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಲು ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯದವರಿಗೆ ಸ್ವಂತ ನಿವೇಶನ ಹೊಂದಿದ್ದು, ವಸತಿ ರಹಿತರಾಗಿರುವ ಟೆಂಟ್ ಅಥವಾ ಗುಡಿಸಲುಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಕುಟುಂಬಗಳು ಈ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ.
ಚಿತ್ರದುರ್ಗ ಜಿಲ್ಲೆಗೆ ಪರಿಶಿಷ್ಟ ಜಾತಿಯ ಸಮುದಾಯದವರಿಗೆ ಒಟ್ಟು 100 ಮನೆಗಳ ನಿರ್ಮಾಣದ ಗುರಿ ನಿಗದಿಪಡಿಸಲಾಗಿದೆ. ಜಿಲ್ಲೆಯ ವ್ಯಾಪ್ತಿಗೆ ಬರುವ ಎಲ್ಲಾ ತಾಲ್ಲೂಕುಗಳ ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ತಮ್ಮ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಫಲಾನುಭವಿಗಳು ಸ್ವಂತ ನಿವೇಶನ ಹೊಂದಿರುವುದಕ್ಕೆ ಸಂಬಂಧಿಸಿದ ಹಕ್ಕುಪತ್ರ ಅಥವಾ ಪೂರಕ ದಾಖಲಾತಿ ಪ್ರತಿ, 2 ಪಾಸ್‍ಫೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರಗಳು, ಆರ್.ಡಿ ಸಂಖ್ಯೆ ಹೊಂದಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಹಾಗೂ ಬ್ಯಾಂಕ್ ಖಾತೆಯ ಪಾಸ್‍ಬುಕ್ ನಕಲು ಪ್ರತಿಯನ್ನು ಒದಗಿಸಬೇಕಿರುತ್ತದೆ. ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳ ಸಮೇತ ಆಯಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿ ಸಂಪರ್ಕಿಸಿ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
===========

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading