ಹಿರಿಯೂರು :
ನಗರದ ಪ್ರಧಾನ ರಸ್ತೆಯಲ್ಲಿರುವ ಸಾರ್ವಜನಿಕ ಆಸ್ಪತ್ರೆಯನ್ನು ನೂತನವಾಗಿ ನಿರ್ಮಿಸಿರುವ ಹೈಟೆಕ್ ಕಟ್ಟಡಕ್ಕೆ ಸ್ಥಳಾಂತರಿಸುವ ಬದಲು ಅಲ್ಲಿಯೇ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ವೃದ್ಧ ರೋಗಿಗಳಿಗೆ ಚಿಕಿತ್ಸೆ ಮುಂದುವರಿಸಬೇಕು ಎಂಬುದಾಗಿ ರೈತ ಸಂಘದ ಗೌರವಾಧ್ಯಕ್ಷರಾದ ಆಲೂರು ಸಿದ್ದರಾಮಣ್ಣ ಒತ್ತಾಯಿಸಿದರು.
ನಗರದ ಪ್ರಧಾನ ರಸ್ತೆಯಲ್ಲಿರುವ ಸಾರ್ವಜನಿಕ ಆಸ್ಪತ್ರೆಯನ್ನು ದಿಂಡಾವರ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಹೈಟೆಕ್ ಕಟ್ಟಡಕ್ಕೆ ಸ್ಥಳಾಂತರಿಸುವ ಬದಲು ಅಲ್ಲಿಯೇ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ವೃದ್ಧ ರೋಗಿಗಳಿಗೆ ಚಿಕಿತ್ಸೆ ಮುಂದುವರಿಸಬೇಕೆಂದು ಆಗ್ರಹಿಸಿ ಮಂಗಳವಾರ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ತಾಲೂಕು ತಹಶೀಲ್ದಾರ್ ರವರಿಗೆ ಮನವಿಪತ್ರ ಸಲ್ಲಿಸಿ, ಮಾತನಾಡಿದರು.
ಆಸ್ಪತ್ರೆಯಿಂದ ಆರು ಕಿಲೋಮೀಟರ್ ದೂರದಲ್ಲಿರುವ ನೂತನ ಆಸ್ಪತ್ರೆಗೆ ನೂರಾರು ರೂಪಾಯಿ ಆಟೋ ಬಾಡಿಗೆ ನೀಡಿ, ಬಡವರು ಹೋಗಿ ಬರುವುದು ಕಷ್ಟ ಇದರಿಂದ ನಗರದಲ್ಲಿರುವ ಖಾಸಗಿ ಆಸ್ಪತ್ರೆಯವರು ಹೆಚ್ಚಿನ ದರ ವಸೂಲಿ ಮಾಡಲು ದಾರಿ ಮಾಡಿಕೊಟ್ಟಂತೆ ಆಗುತ್ತದೆ, ಹಾಗಾಗಿ ಹಳೆಯ ಆಸ್ಪತ್ರೆಯಲ್ಲೂ ಚಿಕಿತ್ಸೆ ಮುಂದುವರಿಸಬೇಕು ಎಂಬುದಾಗಿ ಹೇಳಿದರು.
ಸುಮಾರು 25ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಹೈಟೆಕ್ ಆಸ್ಪತ್ರೆಯಲ್ಲಿ ಅಪಘಾತಗಳಲ್ಲಿ ಗಾಯಗೊಂಡವರಿಗೆ, ದೊಡ್ಡ ಕಾಯಿಲೆಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಿ ಎಂದರಲ್ಲದೆ, ಮಕ್ಕಳ ತಜ್ಞರು ಚರ್ಮರೋಗ ತಜ್ಞರು ಅರವಳಿಕೆ ತಜ್ಞರೇ ಇಲ್ಲವೆಂದ ಮೇಲೆ ಬಡ ರೋಗಿಗಳಿಗೆ ಇನ್ನೆಂತಹ ಚಿಕಿತ್ಸೆ ಸಿಗಲು ಸಾಧ್ಯ ಎಂದರಲ್ಲದೆ,
ಸರ್ಕಾರ ಮೊದಲು ಖಾಲಿ ಇರುವ ಎಲ್ಲಾ ವೈದ್ಯ ಹುದ್ದೆಗಳನ್ನು ಭರ್ತಿ ಮಾಡಲಿ, ಆಸ್ಪತ್ರೆ ಆವರಣದಲ್ಲಿರುವ ಜನರಿಕ್ ಔಷಧಿ ಮಳಿಗೆಯನ್ನು ಈ ಕೂಡಲೇ ಸ್ಥಳಾಂತರಿಸುವ ನಿರ್ಧಾರವನ್ನು ಹಿಂದೆ ಪಡೆಯಬೇಕು ಎಂಬುದಾಗಿ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ತಾಲೂಕು ಘಟಕದ ನೇತೃತ್ವದಲ್ಲಿ ಆಗ್ರಹಿಸಿದರು.
ಈ ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಬಳಗಟ್ಟವೆಂಕಟೇಶ್, ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ, ಶಿವಕುಮಾರ್, ಲಕ್ಷ್ಮಿಕಾಂತ್, ಆರ್.ಕೆ.ಗೌಡ, ತಿಪ್ಪೇಸ್ವಾಮಿ, ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
About The Author
Discover more from JANADHWANI NEWS
Subscribe to get the latest posts sent to your email.