June 28, 2026
IMG-20260627-WA0285

ಚಳ್ಳಕೆರೆ, ಜೂ.27: ಚಳ್ಳಕೆರೆ ಯೋಜನಾ ಕಚೇರಿಯಲ್ಲಿ CSC ಒಲಂಪಿಯಾಡ್ 6.0 ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ನಿರ್ದೇಶಕ ವಿನಯ್ ಕುಮಾರ್ ಸುವರ್ಣ ಅವರು, ವಿದ್ಯಾರ್ಥಿಗಳು ಬಾಲ್ಯದಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಪಠ್ಯ ಪುಸ್ತಕಗಳ ಜೊತೆಗೆ ದಿನಪತ್ರಿಕೆಗಳನ್ನು ಓದುವ ಅಭ್ಯಾಸ ರೂಢಿಸಿಕೊಳ್ಳಬೇಕು ಹಾಗೂ ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.CSC Olympiad 7.0 ರಾಷ್ಟ್ರೀಯ ಮಟ್ಟದ ಆನ್‌ಲೈನ್ ಸ್ಪರ್ಧಾತ್ಮಕ ಪರೀಕ್ಷೆಯಾಗಿದ್ದು, ವಿದ್ಯಾರ್ಥಿಗಳ ಸಾಮಾನ್ಯ ಜ್ಞಾನ, ತಾರ್ಕಿಕ ಚಿಂತನೆ, ಗಣಿತ, ವಿಜ್ಞಾನ ಹಾಗೂ ಇಂಗ್ಲಿಷ್ ವಿಷಯಗಳಲ್ಲಿನ ಸಾಮರ್ಥ್ಯವನ್ನು ಬೆಳೆಸುವ ಉದ್ದೇಶ ಹೊಂದಿದೆ. ಇಂತಹ ಪರೀಕ್ಷೆಗಳು ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸುವುದರೊಂದಿಗೆ ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ತಮ ಅಡಿಪಾಯವಾಗುತ್ತವೆ ಎಂದು ತಿಳಿಸಲಾಯಿತು.
ಅತಿಯಾದ ಮೊಬೈಲ್ ಬಳಕೆ ಮಕ್ಕಳ ಭವಿಷ್ಯಕ್ಕೆ ಹಾನಿಕಾರಕವಾಗಬಹುದು. ಆದ್ದರಿಂದ ಮೊಬೈಲ್ ಬಳಕೆಯನ್ನು ಮಿತಿಗೊಳಿಸಿ, ಪೋಷಕರ ಮೇಲ್ವಿಚಾರಣೆಯಲ್ಲಿ ಶಿಕ್ಷಣಕ್ಕಾಗಿ ಮಾತ್ರ ಬಳಸಬೇಕು. ಜೊತೆಗೆ ದಿನಪತ್ರಿಕೆಗಳು ಹಾಗೂ ಸುದ್ದಿ ವಾಹಿನಿಗಳನ್ನು ವೀಕ್ಷಿಸುವ ಮೂಲಕ ಸ್ಪರ್ಧಾತ್ಮಕ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದು ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಚಳ್ಳಕೆರೆ ತಾಲೂಕಿನಲ್ಲಿ ಒಟ್ಟು 696 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 600 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಕೆಲ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು.
ಜಿಲ್ಲಾ ಎಂಐಎಸ್ ಯೋಜನಾಧಿಕಾರಿ ಮನು ಕುಮಾರ್ ಮಾತನಾಡಿ, ಒಲಂಪಿಯಾಡ್ ಪರೀಕ್ಷೆಗಳು ಮೂರನೇ ತರಗತಿಯಿಂದ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಉತ್ತಮ ತರಬೇತಿ ವೇದಿಕೆಯಾಗಿವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಯೋಜನಾಧಿಕಾರಿ ಶಶಿಕಲಾ, ತಾಲೂಕು ಅಧಿಕಾರಿ ಗೌರವ್, ವಿ.ಎಲ್.ಇ.ಗಳಾದ ಸಂಧ್ಯಾರಾಣಿ ಹಾಗೂ ಬಿಂದು ಸೇರಿದಂತೆ ಇತರರು ಉಪಸ್ಥಿತರಿದ್ದರು

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading