ಚಳ್ಳಕೆರೆ, ಜು.27: ನಗರದ ನಗರಸಭೆ ಕಚೇರಿ ಆವರಣದಲ್ಲಿ ‘ಕ್ಯಾಚ್ ದಿ ರೈನ್’ (Catch the Rain) ಅಭಿಯಾನದ ಅಂಗವಾಗಿ ಜಲ
ಚಳ್ಳಕೆರೆ, ಜು.27: ನಗರದ ನಗರಸಭೆ ಕಚೇರಿ ಆವರಣದಲ್ಲಿ ‘ಕ್ಯಾಚ್ ದಿ ರೈನ್’ (Catch the Rain) ಅಭಿಯಾನದ ಅಂಗವಾಗಿ ಜಲ ಸಂರಕ್ಷಣೆ ಕುರಿತು ಪ್ರತಿಜ್ಞಾವಿಧಿ ಕಾರ್ಯಕ್ರಮ ಸೋಮವಾರ ನಡೆಯಿತು.
ನಗರಸಭೆ ಸಿಬ್ಬಂದಿ ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಳೆನೀರು ಸಂರಕ್ಷಣೆ, ನೀರಿನ ಸದ್ಬಳಕೆ, ಜಲ ಸಂಪನ್ಮೂಲಗಳ ರಕ್ಷಣೆ ಮತ್ತು ನೀರಿನ ವ್ಯರ್ಥ ಬಳಕೆಯನ್ನು ತಡೆಯುವ ಕುರಿತು ಪ್ರತಿಜ್ಞೆ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಮಳೆನೀರಿನ ಸಂಗ್ರಹಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಜಲ ಸಂರಕ್ಷಣೆಯ ಮೂಲಕ ಭವಿಷ್ಯದ ಪೀಳಿಗೆಗೆ ನೀರಿನ ಭದ್ರತೆ ಒದಗಿಸುವ ಅಗತ್ಯವಿದೆ ಎಂದು ತಿಳಿಸಲಾಯಿತು. ಕಾರ್ಯಕ್ರಮದಲ್ಲಿ ನಗರಸಭೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿ ಜಲ ಸಂರಕ್ಷಣೆಗೆ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು.











About The Author
Discover more from JANADHWANI NEWS
Subscribe to get the latest posts sent to your email.