September 14, 2025
IMG20250827090200_01.jpg

ಚಳ್ಳಕೆರೆ ಆ.27

ಗೌರಿ ಹಬ್ಬ, ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ನಗರದ ಮಾರುಕಟ್ಟೆಗಳು ಕಳೆಗಟ್ಟಿದ್ದು, ಹಬ್ಬಕ್ಕಾಗಿ ಗೌರಿ ಗಣೇಶ ಮೂರ್ತಿಗಳು ಹಾಗೂ ಅಗತ್ಯ ಪೂಜಾ ಸಾಮಗ್ರಿ, ಹೂ-ಹಣ್ಣುಗಳ ಖರೀದಿಗೆ ಬುಧವಾರ ಜನ ಮುಗಿ ಬಿದ್ದಿದ್ದರು.
ಬುಧವಾರದ ಗಣೇಶ ಚತುರ್ಥಿ ಹಬ್ಬಗಳ ಪ್ರಯುಕ್ತ ನಗರದಲ್ಲೆಡೆ ಗೌರಿ – ಗಣೇಶ ಮೂರ್ತಿಗಳ ಮಾರಾಟ ಜೋರಾಗಿದೆ. ಬೆಳಂಬೆಳಗ್ಗೆ ಜಿಟಿ ಜಿಟಿ ಮಳೆ ಬರುತ್ತಿರು ಕಾರಣ ಗಣೇಶ ವಿಗ್ರಹಗಳ ಮಾರಾಟಗಾರರು ಮಣ್ಣಿನ ಗಣಪಗಳ ರಕ್ಷಣೆಗೆ ತಾಡಪಾಲ್ ಹೊದಿಕೆ ಹಾಕಿಕೊಂಡೆ ಖರೀದಿ ಮಾಡುತ್ತಿರುವ ದೃಶ್ಯ ಕಂಡು ಬಂತು.
ಮುಖ್ಯ ರಸ್ತೆ ತರಕಾರಿ ಮಾರುಕಟ್ಟೆಗಳಲ್ಲಿ ಹಬ್ಬದ ಖರೀದಿಗಾಗಿ ಜನ ಮುಗಿಬಿದ್ದಿದ್ದರು. ಹಬ್ಬದ ದಿನ ಹೂ-ಹಣ್ಣುಗಳ ದರ ಮತ್ತಷ್ಟು ಏರಿಕೆ ಆಗುವುದರಿಂದ ಹಾಗೂ ಇತರೆ ಕಾರ್ಯಗಳ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ದಾಂಗುಡಿ ಇಟ್ಟಿದ್ದರು. ಇಡೀ ದಿನ ಕಿಕ್ಕಿರಿದು ಜನ ತುಂಬಿದ್ದರು. ಸ್ಥಳೀಯವಾಗಿ ಇರುವ ಮಾರುಕಟ್ಟೆಯ ಜೊತೆಗೆ ಬೀದಿ ಬದಿಯಲ್ಲಿ ಅನೇಕರು ಹೂವು, ಹಣ್ಣು, ಮಾವಿನ ಎಲೆ ಮತ್ತಿತರ ವಸ್ತುಗಳನ್ನು ಮಾರಾಟ ಮಾಡುತ್ತಿರುವುದು ಕಂಡು ಬಂದಿತು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading