August 27, 2026
IMG-20260827-WA0315

ಅದ್ಧೂರಿಯಾಗಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಹಾಗೂ ಕಳಶ ಪ್ರತಿಷ್ಠಾಪನಾ ಕಾರ್ಯಕ್ರಮ….

ಮೊಳಕಾಲ್ಮರು ತಾಲೂಕಿನ ಎಸ್‌. ಹನುಮಾಪುರ ಗ್ರಾಮದಲ್ಲಿ.. ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಹಾಗೂ ಕಳಶ ಪ್ರತಿಷ್ಠಾಪನಾ ಕಾರ್ಯಕ್ರಮವು.. ವಿವಿಧ ಧಾರ್ಮಿಕ ಪೂಜಾ ವಿಧಿ ವಿಧಾನಗಳ ಕಾರ್ಯಕ್ರಮಗಳೊಂದಿಗೆ ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ನಡೆಯಿತು….

ಈ ಸಂದರ್ಭದಲ್ಲಿ ಸ್ವಾಮಿಯ ಪುತ್ಥಳಿ ಪ್ರತಿಷ್ಠಾಪನೆ ಮಾಡುವ ಸಲುವಾಗಿ ಗುಡಿ ಶುದ್ಧೀಕರಣ..ಮಹಾ ಗಣಪತಿ..ನವಗ್ರಹ ಪೂಜೆ ..ಪುಣ್ಯ ವಚನ..ಗಂಗಾ ಪೂಜೆ.. ಫಲ ಪುಷ್ಪ ಅಭಿಷೇಕ ಮುಂತಾದ ಪೂಜಾ ಕಾರ್ಯಕ್ರಮಗಳು ನಡೆದವು…

ಈ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರ ಅನುಪಸ್ಥಿತಿಯಲ್ಲಿ ಅವರ ಸೂಚನೆಯ ಮೇರೆಗೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎನ್.ವೈ ಚೇತನ್‌ ಅವರು ಭಾಗವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು… ಈ ಸಂದರ್ಭದಲ್ಲಿ ಮಾತನಾಡಿದ ಅವರು…ಮಹರ್ಷಿ ವಾಲ್ಮೀಕಿಯವರ ಆದರ್ಶ, ಸಾಹಿತ್ಯ ಹಾಗೂ ಸಾಮಾಜಿಕ ಸಂದೇಶಗಳನ್ನು ಯುವಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಮುದಾಯಕ್ಕೆ ಕರೆ ನೀಡಿದರು…..

ಈ ಸಂದರ್ಭದಲ್ಲಿ ತಾಲ್ಲೂಕು ವಾಲ್ಮೀಕಿ ಸಂಘದ ಅಧ್ಯಕ್ಷ ಬಡೋಬನಾಯಕ..ತಾಲ್ಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಎನ್. ಬಿ.ಗೋವಿಂದಪ್ಪ..ತಾಲ್ಲೂಕು ವಾಲ್ಮೀಕಿ ಸಮುದಾಯದ ಮುಖಂಡರಾದ ಪರಮೇಶ್ವರಪ್ಪ..j.b. ಹಳ್ಳಿ.ನಾಗೇಶಪ್ಪ..ಗೋವಿಂದಪ್ಪ..ಅಡವಿ ಮಾರಣ್ಣ…ಪ್ರಥಮ ದರ್ಜೆ ಗುತ್ತಿಗೆದಾರ ಎಸ್.ಹನುಮಂತಪ್ಪ… ಜಿ. ಆರ್.ಕುಮಾರಸ್ವಾಮಿ… ಹನುಮಾಪುರ ಗ್ರಾಮದ ಸಮಸ್ತ ಜನತೆ ಸೇರಿದಂತೆ…ಸುತ್ತ ಮುತ್ತಲಿನ ಗ್ರಾಮಗಳ ಮುಖಂಡರು…ಯುವಕರು ..ಮಹಿಳೆಯರು..ವಾಲ್ಮೀಕಿ ಸಮುದಾಯದ ಅಭಿಮಾನಿಗಳು..ಕಲಾ ತಂಡಗಳು..ಭಾಗವಹಿಸಿ ಈ ಕಾರ್ಯಕ್ರಮಕ್ಕೆ ಉತ್ತಮ ಮೆರಗು ನೀಡಿದರು….

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading