January 30, 2026


ಚಿತ್ರದುರ್ಗಜ.28:
ಹಿರಿಯೂರು ಪಟ್ಟಣದ ದಕ್ಷಿಣ ಕಾಶಿಯೆಂದು ಹೆಸರಾಗಿರುವ ಹಿರಿಯೂರು ಪಟ್ಟಣದ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ಫೆಬ್ರವರಿ 13ರಂದು ಮಧ್ಯಾಹ್ನ 12ಕ್ಕೆ ಜರುಗಲಿದೆ.
ಶ್ರೀ ತೇರುಮಲ್ಲೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಫೆ.03 ರಿಂದ ಕಂಕಣೋತ್ಸವದೊಂದಿಗೆ ಪ್ರಾರಂಭಗೊಂಡು, ಫೆ.17 ರವರೆಗೆ ಬಹಳ ವಿಜೃಂಭಣೆ ನಡಯಲಿದೆ.
ಫೆ.03ರಂದು ರಾತ್ರಿ 8ಕ್ಕೆ ಕಂಕಣ ಕಲ್ಯಾಣೋತ್ಸವ, ಫೆ.04ರಂದು ರಾತ್ರಿ 8ಕ್ಕೆ ಗಿಳಿ ವಾಹನೋತ್ಸವ, ಫೆ.05ರಂದು ರಾತ್ರಿ 8ಕ್ಕೆ ಗಂಡುಭೇರುಂಡ ವಾಹನೋತ್ಸವ, ಫೆ.06ರಂದು ರಾತ್ರಿ 8.00ಕ್ಕೆ ನವಿಲು ವಾಹನೋತ್ಸವ, ಫೆ.07ರಂದು ರಂದು ರಾತ್ರಿ 8ಕ್ಕೆ ಸಿಂಹ ವಾಹನೋತ್ಸವ, ಫೆ.08ರಂದು ರಾತ್ರಿ 8ಕ್ಕೆ ನಂದಿ ವಾಹನೋತ್ಸವ, ಫೆ.09ರಂದು ರಾತ್ರಿ 8ಕ್ಕೆ ಸರ್ಪ ವಾಹನೋತ್ಸವ, ಫೆ.10ರಂದು ರಾತ್ರಿ 8.00ಕ್ಕೆ ಅಶ್ವ ವಾಹನೋತ್ಸವ, ಫೆ.11ರಂದು ರಾತ್ರಿ 8ಕ್ಕೆ ಗಜ ವಾಹನೋತ್ಸವ (ಮೂರು ಕಳಸ ಸ್ಥಾಪನೆ) ಫೆ.12ರಂದು ಬೆಳಿಗ್ಗೆಯಿಂದ ರಾತ್ರಿಯವರೆಗೆ ಬಸವ ವಾಹನೋತ್ಸವ (ದೊಡ್ಡ ಉತ್ಸವ) ಅಕ್ಕಿ ತಂಬಿಟ್ಟಿನ ಆರತಿ ನಡೆಯಲಿದೆ.
ಹಿರಿಯೂರು ತಾಲ್ಲೂಕು ಐಮಂಗಲ ಹೋಬಳಿ ಬೀರೇನಹಳ್ಳಿ ಮಜುರೆ ಕರಿಯಣ್ಣಹಟ್ಟಿ ಗ್ರಾಮದ ವೀರಕರಿಯಣ್ಣ ದೇವರ ನೇತೃತ್ವದಲ್ಲಿ ಫೆ.13ರಂದು ಬೆಳಿಗ್ಗೆ 10ಕ್ಕೆ ಶಿವಧನಸ್ಸಿನ ಗಂಗಾ ಸ್ನಾನದ ಉತ್ಸವ ನಂತರ ಮಧ್ಯಾಹ್ನ 12ಕ್ಕೆ ಮಘಾ ನಕ್ಷತ್ರದಲ್ಲಿ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ನಡೆಯಲಿದ್ದು, ಮಧ್ಯಾಹ್ನ 1.30ಕ್ಕೆ ಪ್ರಸಾದ ವಿನಿಯೋಗ, ಸಂಜೆ 5ಕ್ಕೆ ಚಂದ್ರಮೌಳೇಶ್ವರ ಮತ್ತು ಉಮಾಮಹೇಶ್ವರ ರಥೋತ್ಸವ ನಡೆಯಲಿದೆ.
ಫೆ.14 ರಂದು ಸಂಜೆ 4ಕ್ಕೆ ಸಿದ್ಧನಾಯಕ ವೃತ್ತದಲ್ಲಿ ಶ್ರೀ ಮದಕರಿ ಯುವಕ ಸಂಘದಿಂದ ಜಂಗೀ ಕುಸ್ತಿಯನ್ನು ಏರ್ಪಡಿಸಲಾಗಿದೆ. ಫೆ.15ರಂದು ರಾತ್ರಿ 8ಕ್ಕೆ ಸುಮಂಗಲೆಯರಿಂದ ಕರ್ಪೂರದಾರತಿ, ಫೆ.16ರಂದು ರಾತ್ರಿ 8ಕ್ಕೆ ಚಿಟುಗ ಮಲ್ಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಅಭಿಷೇಕ ಹಾಗೂ ಉಯ್ಯಾಲೋತ್ಸವ, ವಸಂತೋತ್ಸವ, ಓಕಳಿ ಪಾರ್ವಟೋತ್ಸವ ನಡೆಯಲ್ಲಿದೆ. ಫೆ.17ರಂದು ಸಂಜೆ 4ಕ್ಕೆ ಕಂಕಣ ವಿಸರ್ಜನೆಯೊಂದಿಗೆ ಜಾತ್ರಾ ಮಹೋತ್ಸವ ಮುಕ್ತಾಯಗೊಳ್ಳಲಿದೆ.

ಶ್ರೀ ತೇರುಮಲ್ಲೇಶ್ವರಸ್ವಾಮಿಯ ಜಾತ್ರಾ ಮಹೋತ್ಸವಕ್ಕೆ ಭಕ್ತಾಧಿಗಳು ಹಾಗೂ ಸಾರ್ವಜನಿಕರು ತನು, ಮನ, ಧನ, ಧಾನ್ಯರೂಪದಲ್ಲಿ ಸಹಕರಿಸುವುದು, ಸಾರ್ವಜನಿಕರು ಜಾತ್ರಾ ಮಹೋತ್ಸವದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕು ಎಂದು ಹಿರಿಯೂರು ತಾಲ್ಲೂಕು ತಹಶೀಲ್ದಾರ್ ಹಾಗೂ ಮುಜುರಾಯಿ ಅಧಿಕಾರಿ ಸಿ.ರಾಜೇಶ್ ಕುಮಾರ್ ತಿಳಿಸಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading