February 28, 2026
FB_IMG_1772293768505.jpg

ಚಳ್ಳಕೆರೆ: ಜಿ.ಪಂ. ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಎಸ್. ಆಕಾಶ್, ಭಾ.ಆ.ಸೇ., ಅವರು ಚಳ್ಳಕೆರೆ ತಾಲೂಕಿನ ಎನ್. ಮಹದೇವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಧಾಪುರದಲ್ಲಿರುವ ಭಾರತೀಯ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಶಾಲಾ ಮಕ್ಕಳೊಂದಿಗೆ ಭಾಗವಹಿಸಿದರು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ವಿಜ್ಞಾನ ಪ್ರಾಜೆಕ್ಟ್‌ಗಳನ್ನು ಅವಲೋಕಿಸಿ, ವಿಜ್ಞಾನ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ವಿಜ್ಞಾನಾಸಕ್ತಿ ಬೆಳೆಸುವಲ್ಲಿ ಇಂತಹ ಕೇಂದ್ರಗಳ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ವಿಜ್ಞಾನಾಭಿರುಚಿ ಬೆಳೆಸಿಕೊಳ್ಳುವಂತೆ ಹಾಗೂ ಹೊಸ ಆವಿಷ್ಕಾರಗಳತ್ತ ಮುನ್ನಡೆಯುವಂತೆ ಪ್ರೋತ್ಸಾಹಿಸಿದರು.
ಈ ಸಂದರ್ಭದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ (Indian Institute of Science) ಮುಖ್ಯಸ್ಥರಾದ ಸುಬ್ಬರೆಡ್ಡಿ ಸರ್ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ವಿಜ್ಞಾನ ಕ್ಷೇತ್ರದಲ್ಲಿ ನೀಡಿರುವ ಕೊಡುಗೆಗಾಗಿ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.
ಗ್ರಾಮ ಪಂಚಾಯಿತಿ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading