” ಚಳ್ಳಕೆರೆ-ಜಗತ್ತಿಲ್ಲಿ ಭಾರತೀಯ ಸನಾತನ ಸಂಸ್ಕೃತಿಗೆ ಉತ್ತಮ ಗೌರವವಿದೆ ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸ್ವಯಂಸೇವಕ ಚೇತನ್ ಕುಮಾರ್ ತಿಳಿಸಿದರು.ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಆಯೋಜಿಸಿದ್ದ “ವ್ಯಕ್ತಿತ್ವ ನಿರ್ಮಾಣಕಾರಿ ತರಗತಿ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಭಾರತೀಯ ಸಂಸ್ಕೃತಿಯ ಬಗ್ಗೆ ಉಪನ್ಯಾಸ ನೀಡಿದರು.ಈ ಕಾರ್ಯಕ್ರಮದ ಆರಂಭದಲ್ಲಿ ಭಜನೆಯನ್ನು ಯತೀಶ್ ಎಂ ಸಿದ್ದಾಪುರ ನಡೆಸಿಕೊಟ್ಟರೆ, ಧ್ಯಾನಾಭ್ಯಾಸವನ್ನು ಮಾತಾಜೀ ತ್ಯಾಗಮಯೀ ಅವರು ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ಶ್ರೀಶಾರದಾಶ್ರಮದ ಸದ್ಭಕ್ತರಾದ ನಾಗೇಶ್, ಸಂತೋಷ್, ಋತ್ವಿಕ್, ಅಂಬಣ್ಣ,ಸಂಜನ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.






About The Author
Discover more from JANADHWANI NEWS
Subscribe to get the latest posts sent to your email.