
ಚಿತ್ರದುರ್ಗ ಜೂ.28:
ರಾಜ್ಯ ಸರ್ಕಾರದ ಎರಡು ವರ್ಷಗಳ ಅಭಿವೃದ್ಧಿ ಸಾಧನೆ ಹಾಗೂ ಪಂಚ ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನಕ್ಕೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಚಾಲನೆ ನೀಡಿದರು.
ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ “ಕರ್ನಾಟಕ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಕುರಿತ ಮಾಹಿತಿಯುಳ್ಳ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ, ಸರ್ಕಾರದ ಸಾಧನೆ ಫಲಕಗಳನ್ನು ವೀಕ್ಷಿಸಿದರು.
ವಸ್ತು ಪ್ರದರ್ಶನ ಮಳಿಗೆಯಲ್ಲಿ ಅಳವಡಿಸಲಾದ ಗ್ಯಾರಂಟಿ ಸಮರ್ಪಣೆ ಅಭಿವೃದ್ಧಿಯ ಸಂಕಲ್ಪ, ನಾಡಿನ ಏಳು ಕೋಟಿ ಜನರ ಬೆಳಕು ಗ್ಯಾರಂಟಿ ಬದುಕು ಫಲಕ, ಸರ್ಕಾರದ ಯೋಜನೆಗಳಾದ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಪ್ರಯಾಣಿಸಲು “ಶಕ್ತಿ ಯೋಜನೆ, ಬಡ, ಹಿಂದುಳಿದ ಸೇರಿದಂತೆ ಎಲ್ಲ ಮಹಿಳೆಯರು ಸ್ವಾವಲಂಬಿ ಬದುಕು ನಡೆಸಲು ಎಲ್ಲ ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು ರೂ.200 ಹಣ ನೀಡುವ ಗೃಹಲಕ್ಷ್ಮಿ ಯೋಜನೆ, ಹಸಿವು ಮುಕ್ತ ಕರ್ನಾಟಕದತ್ತ ದಾಪುಗಾಲಿಡುತ್ತಿರುವ ಅನ್ನಭಾಗ್ಯ, ಪದವಿ, ಡಿಪ್ಲೊಮಾ ಪೂರ್ಣಗೊಳಿಸಿದ ಯುವ ಜನತೆಗೆ ಉದ್ಯೋಗ ಪಡೆಯಲು ಅನುಕೂಲವಾಗಲು ಪ್ರತಿ ತಿಂಗಳು ಪದವೀಧರರಿಗೆ ರೂ.3000 ಹಾಗೂ ಡಿಪ್ಲೊಮೊ ಪದವಿದರರಿಗೆ ರೂ.1500 ನೀಡುವ ಯುವನಿಧಿ, ಪ್ರತಿ ಮನೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗಳು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಜಾರಿಗೊಂಡಿದ್ದು, ಜನಸಾಮಾನ್ಯರ ಬದುಕಿಗೆ ಆಸರೆಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳನ್ನೊಳಗೊಂಡ ಸಮಗ್ರ ಮಾಹಿತಿಯುಳ್ಳ ಫಲಕಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಗಣ್ಯರು ವೀಕ್ಷಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರಗಳನ್ನು ಒಳಗೊಂಡ ಸೆಲ್ಫಿ ಪಾಯಿಂಟ್‍ಗಳನ್ನು ವೀಕ್ಷಿಸಿ ಪ್ರಶಂಸಿದ ಜಿಲ್ಲಾ ಉಸ್ತುವಾರಿ ಸಚಿವರು, ಈ ಸೆಲ್ಫಿ ಪಾಯಿಂಟ್‍ಗಳಲ್ಲಿ ಚಳ್ಳಕೆರೆ ಶಾಸಕರಾದ ರಘುಮೂರ್ತಿ ಅವರೊಂದಿಗೆ ನಿಂತು ಫೋಟೋ ಕ್ಲಿಕ್ಕಿಸಿಕೊಂಡರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ವಿವಿಧ ಗಣ್ಯರು ಕೂಡ ಸೆಲ್ಫಿಪಾಯಿಂಟ್‍ನಲ್ಲಿ ನಿಂತು ಫೋಟೊ ತೆಗೆಯಿಸಿಕೊಂಡು ಸಂತಸ ವ್ಯಕ್ತಪಡಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಹಾಗೂ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನವನ್ನು ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದು, ಜೂನ್ 28 ರಿಂದ 30 ರವರೆಗೆ ವಸ್ತುಪ್ರದರ್ಶನವು ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರುತ್ತದೆ. ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳ ಲಾಭ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ದೊರಕಿಸುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳು ಒಳಗೊಂಡಂತೆ ಸರ್ಕಾರದ ಜನಪರ ಯೋಜನೆಗಳ, ಅಭಿವೃದ್ಧಿ ಸಾಧನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿಲು ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಮಾಹಿತಿ ನೀಡಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಲಾಗಿರುವ ರಾಜ್ಯ ಸರ್ಕಾರದ ಎರಡು ವರ್ಷದ ಸಾಧನೆ ಹಾಗೂ ಪಂಚ ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನ ಎಲ್ಲರ ಗಮನ ಸೆಳೆಯುತ್ತಿದೆ. ಈ ವಸ್ತು ಪ್ರದರ್ಶನದಲ್ಲಿ ನಾಡಿನ ಜನರ ಬದುಕು ಬೆಳಗಿಸಿದ ಗ್ಯಾರಂಟಿ ಯೋಜನೆಗಳ ಸಮಗ್ರ ಮಾಹಿತಿ, ಯಶೋಗಾಥೆಗಳನ್ನೊಳಗೊಂಡ ಪುಸ್ತಕವನ್ನು ರಾಜ್ಯದ ಮುಖ್ಯಮಂತ್ರಿಗಳಿಂದ ಪಡೆಯುವಂತೆ ಬಿಂಬಿಸುವ ಸೆಲ್ಪಿ ತೆಗೆದುಕೊಂಡು ಸಾರ್ವಜನಿಕರು ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ. ರಘುಮೂರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜ್‍ಪೀರ್, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ, ತಾಲ್ಲೂಕು ಅಧ್ಯಕ್ಷ ಪ್ರಕಾಶ್, ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ., ಕೆಎಸ್‍ಆರ್‍ಟಿಸಿ ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್, ಡಿವೈಎಸ್‍ಪಿ ದಿನಕರ್, ಸೇರಿದಂತೆ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಸದಸ್ಯರು ಮತ್ತಿತರರು ಇದ್ದರು.








About The Author
Discover more from JANADHWANI NEWS
Subscribe to get the latest posts sent to your email.