March 16, 2026
FB_IMG_1730106205917.jpg


ಹಿರಿಯೂರು:
ಕಾಲೇಜುಗಳಲ್ಲಿ ರಚಿಸಿರುವ ಐ.ಕ್ಯೂ.ಎ.ಸಿ. ರೆಡ್ ಕ್ರಾಸ್, ರೋವರ್ಸ್ ರೆಂಜರ್ಸ್, ಎನ್.ಎಸ್.ಎಸ್. ಸಾಂಸ್ಕೃತಿಕ ಸಮಿತಿ ಸೇರಿದಂತೆ ಎಲ್ಲಾ ಸಮಿತಿಗಳು ಕ್ರಿಯಾತ್ಮಕವಾಗಿದ್ದರೆ ಮಾತ್ರ ವಿದ್ಯಾರ್ಥಿಗಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ನಗರದ ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರದಂದು ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಸಾಂಸ್ಕೃತಿಕ ಹಾಗು ವಿವಿಧ ಸಮಿತಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನದಲ್ಲಿ ಯಾರು ತಮ್ಮ ಭವಿಷ್ಯವನ್ನು ಉಜ್ವಲವಾಗಿ ಕಟ್ಟಿಕೊಳ್ಳುತ್ತಾರೋ ಅವರೆಲ್ಲ ಬಂಗಾರವಾಗುತ್ತಾರೆ. ಕಾಲೇಜು ಇರುವುದೇ ಮೋಜು ಮಸ್ತಿಗೆ ಎಂದು ಭಾವಿಸುವವರು ಬದುಕನ್ನು ಹಾಳು ಮಾಡಿಕೊಳ್ಳುತ್ತಾರೆ ಎಂಬುದಾಗಿ ಎಚ್ಚರಿಸಿದರಲ್ಲದೆ,
ಕಾಲೇಜಿನಲ್ಲಿ ವಾರ್ಷಿಕ ಪರೀಕ್ಷೆಯಲ್ಲಿ ರ್ಯಾಂಕ್ ಪಡೆಯುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗುದ ಬಹುಮಾನವನ್ನು ನೀಡುತ್ತೇನೆ ಎಂಬುದಾಗಿ ಸಚಿವರು ಈ ಸಂದರ್ಭದಲ್ಲಿ ಘೋಷಿಸಿದರು.
ಜಾನಪದ ವಿದ್ವಾಂಸ ಕೆ. ಸಣ್ಣಹೊನ್ನಯ್ಯ ಕಂಟಲಗೆರೆ ಅವರು ಜಾನಪದ ಸಾಹಿತ್ಯದ ಮಹತ್ವವನ್ನು ತಿಳಿಸಿ ಹಲವು ಜಾನಪದ ಗೀತೆಗಳನ್ನು ಹಾಡುವ ಮೂಲಕ ಗಮನ ಸೆಳೆದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಪ್ರೊಫೆಸರ್ ಮಹೇಶ ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷರಾದ ಶ್ರೀಮತಿ ಅಂಬಿಕಾಆರಾಧ್ಯ, ನಗರಸಭೆ ಪೌರಾಯುಕ್ತರಾದ ಎ.ವಾಸೀಂ, ನಗರಸಭೆ ಸದಸ್ಯರಾದ ಶ್ರೀಮತಿ ಶಿವರಂಜಿನಿ ಮಾಜಿ ಸದಸ್ಯರಾದ ಜಿ.ಪ್ರೇಮ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ಜೆ.ರಮೇಶ್, ಕಾಂಗ್ರೆಸ್ ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ್ ಗಿಡ್ಡೋಬನಹಳ್ಳಿ, ಕಾಲೇಜಿನ ಅಧೀಕ್ಷಕ ನರಸಿಂಹಮೂರ್ತಿ, ಸಹಾಯಕ ಪ್ರಾಧ್ಯಾಪಕ ಬಿ.ಇ.ಜಗನ್ನಾಥ್, ಡಿ.ಧರಣೇಂದ್ರಯ್ಯ, ರಾಮಪ್ಪ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading