January 29, 2026
FB_IMG_1730115036108.jpg


ಹಿರಿಯೂರು:
ತಾಲ್ಲೂಕಿನ ದೇವರಕೊಟ್ಟ ಗ್ರಾಮದ ಹತ್ತಿರವಿರುವ ವೇದಾವತಿ ಹಾಗೂ ಸುವರ್ಣಮುಖಿ ನದಿಗಳು ಸಂಗಮವಾಗಿ ಹರಿಯುವ ಬ್ಯಾಡರಹಳ್ಳಿಯ ಹಳೆಯ ಸೇತುವೆಯ ಬಳಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ತಮ್ಮ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬ್ಯಾಡರಹಳ್ಳಿ ಬಳಿಯ ಈ ಸೇತುವೆ ತುಂಬಾ ಹಳೆಯ ಸೇತುವೆಯಾಗಿದ್ದು, ಇತ್ತೀಚೆಗೆ ಮಾಧ್ಯಮಗಳಲ್ಲಿ ಈ ಬ್ರಿಡ್ಜ್ ನ ಗುಣಮಟ್ಟದ ಬಗ್ಗೆ ಊಹಾಪೋಹಗಳ ಸುದ್ಧಿ ಬಂದಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಬ್ರಿಡ್ಜ್ ಹತ್ತಿರ ಸ್ಥಳ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading