ಹಿರಿಯೂರು:
ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಮನೆಯ ಮೇಲ್ಚಾವಣಿ ಕುಸಿದು ಸಾವನ್ನಪ್ಪಿದ ಸಂತ್ರಸ್ತರ ಕುಟುಂಬಕ್ಕೆ 5 ಲಕ್ಷ ರೂಗಳ ಚೆಕ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವಾರದ ಡಿ. ಸುಧಾಕರ್ ವಿತರಿಸಿದರು.
ತಾಲ್ಲೂಕಿನ ಬ್ಯಾಡರಹಳ್ಳಿ ಗ್ರಾಮದ ಮೀನಾಕ್ಷಮ್ಮ ಮಹಂತೇಶ್ ರವರು ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ವಾಸದ ಮನೆ ಮೇಲ್ಚಾವಣಿ ಕುಸಿದು ಮೃತಪಟ್ಟಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ ಸಂತ್ರಸ್ತ ಕುಟುಂಬದ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳುವುದರ ಮೂಲಕ ಸರ್ಕಾರದ ವತಿಯಿಂದ 5 ಲಕ್ಷ ರೂಗಳ ಪರಿಹಾರ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ಜೆ.ರಮೇಶ್, ಕಾಂಗ್ರೆಸ್ ಮುಖಂಡರುಗಳಾದ ಈರಲಿಂಗೇಗೌಡ, ಕಂದಿಕೆರೆ ಸುರೇಶ್ ಬಾಬು, ಬ್ಯಾಡರಹಳ್ಳಿ ಪಂಚಾಯಿತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಣ್ಮುಖ, ಐನಹಳ್ಳಿ ಅಮೃತೇಶ್ವರಸ್ವಾಮಿ, ಕೆ.ಡಿ.ಪಿ.ಸದ್ಸಯ ದೊಡ್ಡಘಟ್ಟ ಶಿವಕುಮಾರ್, ಬ್ಯಾಡರಹಳ್ಳಿಮಂಜಣ್ಣ, ಬ್ಯಾಡರಹಳ್ಳಿರವಿ, ಮಂಜುನಾಥ್, ನರಸಿಂಹಮೂರ್ತಿ, ಬ್ಯಾಡರಹಳ್ಳಿ ಗ್ರಾ.ಪಂ.ಅಧ್ಯಕ್ಷ ಓಬಳೇಶ್, ಟಿ.ಓಬೇನಹಳ್ಳಿ ಮೂರ್ತಿ, ನಾಗೇಶ್, ತಿಪ್ಪೀರಣ್ಣ ಸೇರಿದಂತೆ ಅನೇಕ ಮುಖಂಡರುಗಳು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.