March 16, 2026
FB_IMG_1730118016021.jpg


ಹಿರಿಯೂರು:
ತಾಲ್ಲೂಕಿನ ವಾಣಿವಿಲಾಸ ಸಾಗರ ಜಲಾಶಯದ ಕೋಡಿ ತಗ್ಗಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಸುಖಾಸುಮ್ಮನೆ ಮಾತನಾಡುವುದು ಬೇಡ. ಡ್ಯಾಂ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಸ್ಪಷ್ಟಪಡಿಸಿದರು.
ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಪತ್ರಕರ್ತರು ಕೇಳುವ ಪ್ರಶ್ನೆಗಳಿಗೆ ಉತ್ತರಿಸುವ ಸಂದರ್ಭದಲ್ಲಿ ಅವರು ಮಾತನಾಡಿದರು.
ವಾಣಿವಿಲಾಸ ಸಾಗರ ಜಲಾಶಯವನ್ನು ಸುಮಾರು 750 ಕೋಟಿ ರೂಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಚಿಂತನೆ ನಡೆಯುತ್ತಿರುವುದನ್ನು ಬಿಟ್ಟರೆ ಬೇರೆ ಯಾವುದೇ ಬದಲಾವಣೆಯು ಇಲ್ಲ ಎಂಬುದಾಗಿ ಅವರು ಹೇಳಿದರು.
ನಗರದ ರಸ್ತೆ ಅಗಲೀಕರಣ ಕಾಮಗಾರಿ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು ನ್ಯಾಯಾಲಯದಿಂದ ಯಾವುದೇ ತಡೆಯಾಜ್ಞೆ ಇಲ್ಲ. ಕಟ್ಟಡ ಮಾಲೀಕರು ನಾಮಫಲಕ ಹಾಕಿಸಿದ್ದರೂ ರಸ್ತೆ ವಿಸ್ತರಣೆ ನಡೆಯುವುದು ಎಂದರಲ್ಲದೆ,
ಕೆಲವು ಕಟ್ಟಡ ಮಾಲೀಕರು 50ಅಡಿಗಳನ್ನು ಮಾತ್ರ ಹೊಡೆಯಿರಿ ಎಂಬುದಾಗಿ ಪಟ್ಟು ಹಿಡಿದಿದ್ದಾರೆ. ಆದರೆ ರಸ್ತೆ ಮಧ್ಯದಿಂದ 70ಅಡಿ ರಸ್ತೆ ವಿಸ್ತರಣೆ ಮಾಡಲಾಗುವುದು. ಕಾನೂನಿನ ಪ್ರಕಾರ ರಸ್ತೆ ಅಗಲೀಕರಣ ಕಾಮಾಗಾರಿ ನಡೆಯುವುದು ಖಚಿತ ಎಂಬುದಾಗಿ ಅವರು ಸ್ಪಷ್ಟಪಡಿಸಿದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading