
ಚಿತ್ರದುರ್ಗ ನ.28:
ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ಗ್ರಾಮ ಪಂಚಾಯಿತಿ ಆವರಣದಲ್ಲಿರುವ ಕೂಸಿನ ಮನೆ ಅಂಗನವಾಡಿ ಕೇಂದ್ರದಲ್ಲಿ ಬುಧವಾರ ಲಿಂಗಾಧಾರಿತ ದೌರ್ಜನ್ಯ ನಿವಾರಿಸುವ ಅರಿವು ಶಿಬಿರ ನಡೆಯಿತು.
“ಇಂಟರ್ ನ್ಯಾಷನಲ್ ಆಫ್ ದಿ ಎಲಿಮಿನೇಷನ್ ಆಫ್ ದಿ ವಯಲೆನ್ಸ್ ಏವೆರೆಸ್ಟ್ ವುಮೆನ್ ಅಂಡ್ ಇಂಟರ್ ನ್ಯಾಷನಲ್ ವುಮೆನ್ ರೈಟ್ಸ್ ಡೇ” 16 ದಿನಗಳ ವಿಶೇಷ ಜಾಗೃತಿ ಅಭಿಯಾನದ ಅಂಗವಾಗಿ ಭರಮಸಾಗರ ಯೋಜನೆಯ ಹಿರೇಗುಂಟನೂರು-1 ಮತ್ತು 2 ವೃತ್ತದ ಅಂಗನವಾಡಿ ಕಾರ್ಯಕರ್ತೆಯರಿಗೆ ಒಂದು ದಿನದ ಲಿಂಗಾಧಾರಿತ ದೌರ್ಜನ್ಯ ನಿವಾರಿಸುವ ಕುರಿತು ಅರಿವು ಮೂಡಿಸಲಾಯಿತು.
ಅಂಗನವಾಡಿ ಕಾರ್ಯಕರ್ತರಿಗೆ ಮತ್ತು ಸ್ಥಳೀಯ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮಹಿಳಾ ಆಧಾರಿತ ಯೋಜನೆಗಳು ಹಾಗೂ ಅವುಗಳ ಪ್ರಯೋಜನಗಳು ಬಗ್ಗೆ ಮತ್ತು ಸಾಂತ್ವಾನ ಕೇಂದ್ರಗಳು, ಸಖಿ ಒನ್ ಸ್ಟಾಪ್ ಸೆಂಟರ್‍ಗಳ ಉಪಯೋಗಗಳ ಬಗ್ಗೆ ಮಹಿಳಾ ಸಹಾಯವಾಣಿ ಸಂಖ್ಯೆ 181, ತುರ್ತು ಸಹಾಯವಾಣಿ ಸಂಖ್ಯೆ 112, ಮಕ್ಕಳ ಸಹಾಯವಾಣಿ ಸಂಖ್ಯೆ 1058, ಮಹಿಳಾ ಸುರಕ್ಷತೆ ಹಾಗೂ ಮಹಿಳೆಯರಿಗಾಗಿ ಇರುವ ಕಾಯ್ದೆ ಕಾನೂನುಗಳು ಸೇರಿದಂತೆ ಈ ಎಲ್ಲಾ ಪ್ರಯೋಜನಗಳನ್ನು ಪಡೆದುಕೊಳ್ಳುವಂತೆ ಮಹಿಳೆಯರಿಗೆ ಉತ್ತೇಜಿಸಲಾಯಿತು. ಅಂಗನವಾಡಿ ಕಾರ್ಯಕರ್ತರಿಗೆ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಅರಿವು ಜಾಗೃತಿ ಮಾಡುವಂತೆ ಸೂಚಿಸಲಾಯಿತು.
ಕಾರ್ಯಕ್ರಮದಲ್ಲಿ ಸಿರಿಗೆರೆ ಗ್ರಾಮ ಪಂಚಾಯಿತಿ ಸದಸ್ಯೆ ಹಾಲಮ್ಮ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹೇಮಾವತಿ, ಹಿರೇಗುಂಟನೂರು ಪ್ರಾಥಮಿಕ ಆರೋಗ್ಯ ಕೇಂದ್ರ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳಾದ ಗಂಗಮ್ಮ, ವೀರಮ್ಮ, ವೃತ್ತ ಮೇಲ್ವಿಚಾರಕಿ ಮಂಜುಳಾ, ಅಂಗನವಾಡಿ ಕಾರ್ಯಕರ್ತರು, ಗ್ರಾಮಸ್ಥರು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.