
ಚಳ್ಳಕೆರೆ: ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಡಾ.ವಾಸುದೇವ ಮೇಟಿ ಬಣದ ನೂತನ ತಾಲೂಕು ಅಧ್ಯಕ್ಷರನ್ನಾಗಿ ಚಿಕ್ಕೇನಹಳ್ಳಿ ಶ್ರೀನಿವಾಸ್ ರವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಲಕ್ಷ್ಮಿಕಾಂತ ಲಿಂಗವರಹಟ್ಟಿ ಘೋಷಿಸಿದರು.
ಈ ವೇಳೆ ಮಾತನಾಡಿದ ಅವರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಡಾ. ವಾಸುದೇವ ಮೇಟಿ ಬಣ ತಾಲೂಕಿನ ರೈತರ ಸಮಸ್ಯೆಗಳಿಗೆ ಧ್ವನಿಯಾಗಲು ನೂತನವಾಗಿ ತಾಲೂಕು ಘಟಕ ಹೋಬಳಿ ಹಾಗೂ ಗ್ರಾಮೀಣ ಘಟಕಗಳನ್ನು ಸ್ಥಾಪಿಸಲಾಗಿದ್ದು ಈ ಮೂಲಕ ರೈತ ಪರವಾದ ಹೋರಾಟಗಳಿಗೆ ಮುನ್ನುಡಿ ಬರೆಯಲಾಗಿದೆ ರೈತರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಬಣವು ಸಮರ್ಥವಾಗಿದ್ದು ರೈತ ಪರವಾದ ಹೋರಾಟಗಳ ರೂಪರೇಷೆಗಳನ್ನು ಸಿದ್ಧಪಡಿಸಿ ಸರ್ಕಾರದ ಕಿವಿ ಹಿಂಡಲು ಸಿದ್ಧರಾಗಿದ್ದೇವೆ ಎಂದು ತಿಳಿಸಿದರು.





ತಾಲೂಕು ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ ಆಳುವ ಸರ್ಕಾರಗಳು ಚುನಾವಣೆಗಳಲ್ಲಿ ರೈತ ಪರವಾದ ನೀತಿಗಳನ್ನು ತಮ್ಮ ಪ್ರಣಾಳಿಕೆಗಳಲ್ಲಿ ಘೋಷಿಸಿ ಅಧಿಕಾರಕ್ಕೆ ಬಂದ ನಂತರ ರೈತರನ್ನು ಮರೆಯುತ್ತಿದ್ದು ರೈತರ ಹಿತ ಕಾಪಾಡುವಲ್ಲಿ ತಾರತಮ್ಯ ಸಾಗುತ್ತಿವೆ ಹೀಗಾಗಿ ರೈತರ ಸಮಸ್ಯೆಗಳನ್ನು ಪರಿಹರಿಸಲು ನಮ್ಮ ಸಂಘಟನೆಯ ಮೂಲಕ ಎಲ್ಲಾ ಹೋರಾಟಗಳಲ್ಲಿ ಭಾಗವಹಿಸಿ ನ್ಯಾಯ ದೊರಕಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ನಗರ ಸಭೆಯ ನಾಮನಿರ್ದೇಶಿತ ಸದಸ್ಯ ನೇತಾಜಿ ಆರ್ ಪ್ರಸನ್ನ ಮಾತನಾಡಿ ರೈತ ಸಂಘಟನೆಗಳು ಒಗ್ಗಟ್ಟಾಗಿ ಹೋರಾಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ರೈತರ ಸಮಸ್ಯೆಗಳು ಸರ್ಕಾರದ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಪರಿಹಾರವಾಗಬೇಕಾದರೆ ಎಲ್ಲ ಸಂಘಟನೆಗಳು ಒಂದೇ ಸೂರಿನಡಿ ಒಗ್ಗೂಡಿ ಹೋರಾಟಗಳನ್ನು ನಡೆಸಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ ತಮ್ಮ ವಿಭಿನ್ನ ಕಾರ್ಯಕ್ಷಮತೆ ಹಾಗೂ ನೀತಿಗಳಿಂದಾಗಿ ಸಂಘಟನೆಗಳು ಹೊಸದಾಗಿ ರೂಪುಗೊಳ್ಳುವುದು ತಪ್ಪಲ್ಲ ಆದರೆ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳುವಾಗ ಎಲ್ಲಾ ಸಂಘಟನೆಗಳು ಒಗ್ಗಟ್ಟಾಗಿ ಹೋರಾಟ ನಡೆಸಿದಾಗ ಮಾತ್ರ ಫಲ ದೊರೆಯುತ್ತದೆ ಈ ನಿಟ್ಟಿನಲ್ಲಿ ಎಲ್ಲ ರೈತ ಸಂಘಟನೆಗಳ ಮುಖಂಡರು ಚಿಂತನೆ ನಡೆಸಬೇಕು ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷೆ ಲೋಲಾಕ್ಷಮ್ಮ ಜಿಲ್ಲಾ ಕಾರ್ಯದರ್ಶಿ ಓಂಕಾರಮ್ಮ ತಾಲೂಕು ಘಟಕದ ಅಧ್ಯಕ್ಷೆ ಜಯಲಕ್ಷ್ಮಿ ಮಂಜುಳಾ ನಿಜಲಿಂಗಪ್ಪ ಮಲ್ಲಣ್ಣಗೌಡ ನಾಗರಾಜ್ ಚಿಕ್ಕಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.