
ಹಿರಿಯೂರು:
ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯಂತೆ ಸರ್ಕಾರಿ ನೌಕರಿಯಲ್ಲಿರುವವರು ಹಾಗೂ ಆದಾಯ ತೆರಿಗೆ ಪಾವತಿದಾರರ ಬಿ.ಪಿ.ಎಲ್ ಪಡಿತರ ಚೀಟಿಗಳನ್ನಷ್ಟೇ ರದ್ದುಪಡಿಸಲಾಗುತ್ತಿದೆ. ಬಡತನ ರೇಖೆಗಿಂತ ಕೆಳೆಗಿರುವವರ ಕಾರ್ಡ್ ಗಳನ್ನು ಯಾವುದೇ ಕಾರಣಕ್ಕೂ ರದ್ದು ಪಡಿಸುವುದಿಲ್ಲ ಎಂಬುದಾಗಿ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಸ್ಪಷ್ಟಪಡಿಸಿದರು.
ತಾಲ್ಲೂಕಿನ ಆದಿವಾಲ ಫಾರಂನಲ್ಲಿ ನ್ಯಾಯ ಬೆಲೆ ಅಂಗಡಿಯ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಡವರಿಗೆ ಪೂರೈಸುವ ಪಡಿತರ ಧಾನ್ಯ ಉಳ್ಳವರ ಪಾಲಾಗಬಾರದು ಎಂಬ ಕಾರಣಕ್ಕೆ ಸರ್ಕಾರವು ಅನರ್ಹರ ಪಡಿತರ ಕಾರ್ಡ್ಗಳ ರದ್ಧತಿಗೆ ಮುಂದಾಗಿದೆ. ಅಧಿಕಾರ ಕಳೆದುಕೊಂಡು ಹತಾಶರಾಗಿರುವ ಬಿ.ಜೆ.ಪಿಯವರು ವದಂತಿಗಳನ್ನು ಹಬ್ಬಿಸುವ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅದರಲ್ಲಿ ಅವರಿಗೆ ಯಶಸಸ್ಸು ಸಿಗುವುದಿಲ್ಲ. ಎಂದರಲ್ಲದೆ,
ಕಾಂಗ್ರೆಸ್ ಬಡವರ ಪರ ಎಂಬುದಕ್ಕೆ ಮೂರು ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಮತದಾರರು ನೀಡಿರುವ ತೀರ್ಪು ಸಾಕ್ಷಿಯಾಗಿದೆ. ನ್ಯಾಯಬೆಲೆ ಅಂಗಡಿಗಳವರು ಪಡಿತರವನ್ನು ಫಲಾನುಭವಿಗಳಿಗೆ ಪ್ರಾಮಾಣಿಕವಾಗಿ ತಲುಪಿಸಬೇಕು ಎಂಬುದಾಗಿ ಅವರು ಹೇಳಿದರು.
ಈ ಸಂದರ್ಭದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಂದಿಹಳ್ಳಿ ಶ್ರೀಧರ್, ಕಾರ್ಯದರ್ಶಿ ದೇವಾನಂದ್ ಬಾಬು, ಮುಖಂಡರಾದ ಆನಂದಪ್ಪ, ಎಂ.ಜಿ.ಸುಂದರಮೂರ್ತಿ, ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ ಎನ್.ರಘು, ಮಣಿಯಪ್ಪ, ಪಟ್ರೆಹಳ್ಳಿ ಶ್ರೀಧರ್, ಮಹಾಲಿಂಗಪ್ಪ ಹಾಗೂ ಗ್ರಾಮಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.