
ಹಿರಿಯೂರು :
ಈ ಕನ್ನಡಭಾಷೆಯು ನಮ್ಮ ತಾಯಿ ಭಾಷೆಯಾಗಿದ್ದು, ಈ ಕನ್ನಡದ ನೆಲ-ಜಲ, ಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಕನ್ನಡಿಗರಾದ ನಾವು-ನೀವೆಲ್ಲರೂ ಮಾಡಬೇಕಿದೆ ಎಂಬುದಾಗಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ ವಾಣಿವಿಲಾಸ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಬಿ.ಎಸ್.ರಘುನಾಥ್ ಹೇಳಿದರು.
ನಗರದ ವಾಣಿವಿಲಾಸ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ವೇದಿಕೆ, ಶ್ರೀ ಏಕನಾಥೇಶ್ವರಿ ಸಂಗೀತ ವಿದ್ಯಾಲಯ, ತಾಲ್ಲೂಕು ಮಕ್ಕಳ ಸಾಹಿತ್ಯ ವೇದಿಕೆ, ವಾಣಿವಿಲಾಸವಿದ್ಯಾಸಂಸ್ಥೆ ಹಿರಿಯೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡರಾಜ್ಯೋತ್ಸವ ಹಾಗೂ ಕನ್ನಡ ಗೀತಾಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡಭಾಷೆಗೆ ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸವಿದ್ದು, ಸರಳವಾದ, ಸುಂದರವಾದ, ವಿಶ್ವದ ಏಕೈಕ ಭಾಷೆ ಕನ್ನಡವಾಗಿದೆ, ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿ ಲಭಿಸಿದ್ದು, ಎಲ್ಲಾ ಭಾಷಿಕರನ್ನು ಒಗ್ಗೂಡಿಸಿ, ಐಕ್ಯತೆ ಸಮಗ್ರತೆ ಸಹೋದರತೆ, ತರುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದರಲ್ಲದೆ,
ಕನ್ನಡ ಭಾಷೆಯನ್ನು ಸರ್ಕಾರ ಕಟ್ಟುನಿಟ್ಟಾಗಿ ಆಡಳಿತ ಭಾಷೆಯನ್ನಾಗಿ ಅನುಷ್ಠಾನಗೊಳಿಸಬೇಕು, ಕನ್ನಡ ಭಾಷಿಕರಿಗೆ ವಿಶೇಷ ಸವಲತ್ತು, ಉದ್ಯೋಗ ನೀಡುವ ಮೂಲಕ ಕನ್ನಡನಾಡಿನಲ್ಲಿ ಕನ್ನಡಿಗರಿಗೆ ಹೆಚ್ಚು, ಹೆಚ್ಚು ಅವಕಾಶಗಳು ಸಿಕ್ಕಂತಾಗುತ್ತದೆ ಎಂಬುದಾಗಿ ಹೇಳಿದರು.
ಜಿಲ್ಲಾ ಮಕ್ಕಳ ಸಾಹಿತ್ಯ ವೇದಿಕೆ ಉಪಾಧ್ಯಕ್ಷರಾದ ಎಸ್.ಜಿ.ರಂಗಸ್ವಾಮಿ ಸಕ್ಕರ ಮಾತನಾಡಿ, ಈ ದೇಶದಲ್ಲಿ ಸುಮಾರು 1652 ಭಾಷೆಯನ್ನು ಮಾತನಾಡುವ ಸಮುದಾಯಗಳನ್ನು ಕಾಣಬಹುದಾಗಿದ್ದು, ಆದರೆ ನಮ್ಮ ದೇಶದ ಸಂವಿಧಾನವು ಕೇವಲ 22 ಭಾಷೆಗಳಿಗೆ ಮಾತ್ರ ಮಾನ್ಯತೆ ನೀಡಿದೆ, ಅದರಲ್ಲಿ ಈ ಕನ್ನಡಭಾಷೆಯೂ ಸಹ ಒಂದು ಎನ್ನುವುದು ನಿಜಕ್ಕೂ ಹೆಮ್ಮೆಯ ಸಂಗತಿಯಾಗಿದೆ, ಇಂತಹ ಈ ಕನ್ನಡ ನೆಲ,ಜಲ, ಭಾಷೆ, ಸಂಪತ್ತನ್ನು ರಕ್ಷಿಸುವ ಹೊಣೆ ನಮ್ಮೆಲ್ಲರ ಮೇಲಿದೆ ಎಂಬುದಾಗಿ ಹೇಳಿದರು.
ವಾಣಿವಿಲಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆಲೂರು ಹನುಮಂತರಾಯಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕನ್ನಡ ನೆಲ-ಜಲ ಭಾಷೆಯ ಬಗ್ಗೆ ಅಭಿಮಾನವನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಅತ್ಯಗತ್ಯವಾಗಿದ್ದು, ಕನ್ನಡ ರಾಜ್ಯೋತ್ಸವವನ್ನು ಕೇವಲ ನವಂಬರ್ ತಿಂಗಳಿಗೆ ಮಾತ್ರ ಸೀಮಿತಗೊಳಿಸದೆ, ವರ್ಷದ ಎಲ್ಲಾ ತಿಂಗಳು ನಿತ್ಯೋತ್ಸವದಂತೆ ಆಚರಿಸಬೇಕು ಎಂಬುದಾಗಿ ಹೇಳಿದರು.
ಇದೇ ಸಂದರ್ಭದಲ್ಲಿ ನಡೆದ ಕನ್ನಡ ಗೀತಗಾಯನ ಸ್ಪರ್ಧೆಯಲ್ಲಿ ಕುಮಾರಿ ಮಾನ್ಯ ಪ್ರಥಮ ಬಹುಮಾನ, ಕುಮಾರಿ ಕೀರ್ತನ ದ್ವಿತೀಯ ಬಹುಮಾನ, ಕುಮಾರಿ ವಿಶೃತ ತೃತೀಯ ಬಹುಮಾನ ಹಾಗೂ ಧನುಷ್ ಹಾಗೂ ಪ್ರಜ್ಞಾ ಸಮಾಧಾನಕರ ಬಹುಮಾನಗಳನ್ನು ಪಡೆದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿವಿಲಾಸ ವಿದ್ಯಾಸಂಸ್ಥೆಯ ಅಧ್ಯಯಕ್ಷರಾದ ಬಿ.ಎಸ್.ರಘುನಾಥ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಲ್ಲೂಕು ಮಕ್ಕಳ ಸಾಹಿತ್ಯ ವೇದಿಕೆ ಅಧ್ಯಕ್ಷರಾದ ನಿಜಲಿಂಗಪ್ಪ, ಉಪಾಧ್ಯಕ್ಷರಾದ ಹರ್ತಿಕೋಟೆ ಮಹಾಸ್ವಾಮಿ, ಕಾರ್ಯದರ್ಶಿ ಶಂಕರಲಿಂಗಯ್ಯ, ಏಕನಾಥೇಶ್ವರಿ ಸಂಗೀತ ವಿದ್ಯಾಲಯದ ಪ್ರಾಂಶುಪಾಲರಾದ ಸಂಗೀತ ವಿದ್ವಾನ್ ಆರ್.ತಿಪ್ಪೇಸ್ವಾಮಿ, ನಾಗಸುಂದರಮ್ಮ, ಎಂ.ಬಿ.ಲಿಂಗಪ್ಪ, ಪಿ.ಎಂ.ತಿಪ್ಪೇಸ್ವಾಮಿ, ನಾಗರತ್ನಮ್ಮ, ಪ್ರೋ.ಬಿ.ಕೆ.ನಾಗಣ್ಣ, ದೇವರಾಜ್ ಮೂರ್ತಿ, ಡಿಂಪಲ್ ಪಾಪಣ್ಣ, ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಕೋ-ಆರ್ಡಿನೇಟರ್ ಗಳಾದ ಶ್ರೀಮತಿ ನಂದಿನಿ, ಶ್ರೀಮತಿ ರಚನ, ಶಿಕ್ಷಕಿಯರುಗಳಾದ ಶ್ರೀಮತಿ ರಂಜಿತಾ, ಶ್ರೀಮತಿ ಗಂಗಮ್ಮ, ಶ್ರೀಮತಿ ಸಬೀಹಾ, ಶ್ರೀಮತಿ ಮಮತಾ, ಶ್ರೀಮತಿ ಜಯಸುಧಾ, ಶ್ರೀಮತಿ ಅಕ್ಷತಾ, ಉಮೇಶ್ ಯಾದವ್, ಸೇರಿದಂತೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.


About The Author
Discover more from JANADHWANI NEWS
Subscribe to get the latest posts sent to your email.