ಚಿತ್ರದುರ್ಗನ.28:
ಚಿತ್ರದುರ್ಗ ನಗರದ ಜೆ.ಜೆ.ಹಟ್ಟಿಯಲ್ಲಿ ಶುಕ್ರವಾರ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಕುರಿತು ಹಾಗೂ ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ನಮ್ಮ ಶೌಚಾಲಯ-ನಮ್ಮ ಭವಿಷ್ಯ ಕುರಿತು ಮಾನ್ವಿತ ಜಾನಪದ ಕಲಾತಂಡದವರಿಂದ ಬೀದಿ ನಾಟಕ ಪ್ರದರ್ಶನ ನಡೆಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಹಮ್ಮಿಕೊಂಡಿದ್ದ ಬೀದಿ ನಾಟಕ ಪ್ರದರ್ಶನಕ್ಕೆ ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಚಾಲನೆ ನೀಡಿದರು.
ನಂತರ ಡಾ.ಬಿ.ವಿ.ಗಿರೀಶ್ ಅವರು, ತಾಯಿ ಮತ್ತು ಮಗುವಿನ ಆರೈಕೆ, ಲಸಿಕಾ ಕಾರ್ಯಕ್ರಮ, ಶಿಶುಮರಣ ತಾಯಿಮರಣದ ಬಗ್ಗೆ ಮಾಹಿತಿ ನೀಡಿದರು. ಡಿಸೆಂಬರ್ 21 ರಿಂದ 24ರವರೆಗೆ ಪಲ್ಸ್ ಪೆÇೀಲಿಯೋ ಕಾರ್ಯಕ್ರಮ ಇದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯಕ್ ಮಾತನಾಡಿ, ವಿಶ್ವ ಶೌಚಾಲಯ ದಿನಾಚರಣೆ ನವಂಬರ್ 19ರಂದು ಆಚರಿಸಲಾಗಿದ್ದು, ಡಿಸೆಂಬರ್ 10ರವರೆಗೆ ನಮ್ಮ ಶೌಚಾಲಯ-ನಮ್ಮ ಭವಿಷ್ಯ ಅಭಿಯಾನವನ್ನು ಆಯೋಜಿಸಲಾಗಿದ್ದು, ಆರೋಗ್ಯ ಮತ್ತು ಸಾಮಾಜಿಕ ಸಮೃದ್ಧಿಗಾಗಿ ನೈರ್ಮಲ್ಯ ಮತ್ತು ಸ್ವಚ್ಛತೆ ಹಾಗೂ ವೈಯಕ್ತಿಕ ಶೌಚಾಲಯಗಳನ್ನು ಬಳಸಬೇಕು ಎಂದು ತಿಳಿಸಿದರು.
ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೌರಮ್ಮ, ಕ್ಷಯ ರೋಗದ ಬಗ್ಗೆ ಕುಟುಂಬ ಕಲ್ಯಾಣ ಯೋಜನೆ, ಕುಷ್ಠರೋಗ ಕಾರ್ಯಕ್ರಮ, ಸಾಂಕ್ರಾಮಿಕ ರೋಗಗಳು ಹಾಗೂ ಅಸಾಂಕ್ರಮಿಕ ರೋಗಗಳು ಬಗ್ಗೆ ಬೀದಿ ನಾಟಕ ಮೂಲಕ ಪ್ರದರ್ಶನವನ್ನು ಏರ್ಪಡಿಸಲಾಗಿದ್ದು, ಸಾರ್ವಜನಿಕರು ಸದಾ ಉಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಿಎಚಿಡಿ ವಿಭಾಗದ ಅಶೋಕ್, ರುದ್ರಮನಿ, ಆರೋಗ್ಯ ಸುರಕ್ಷಾತಾಧಿಕಾರಿ ಪ್ರವೀಣ್, ಆಶಾ ಕಾರ್ಯಕರ್ತೆಯರು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.