ಚಿತ್ರದುರ್ಗಜ.29:
ಚಿತ್ರದುರ್ಗ ನಗರದ ಐಎಂಎ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣಾ ಮಸೂದೆ (ಪೋಕ್ಸೋ) ಕುರಿತು ಮಾಹಿತಿ ಶಿಕ್ಷಣ ಸಂವಹನ ತರಬೇತಿ ಕಾರ್ಯಾಗಾರ ನಡೆಯಿತು.
ಜಿಲ್ಲಾ ತಾಯಿ ಮಕ್ಕಳ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಡಿಎಂ ಅಭಿನವ ಮಾತನಾಡಿ, ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ವೈದ್ಯಾಧಿಕಾರಿಗಳ ಜವಾಬ್ದಾರಿ ಪಾತ್ರ ಬಹಳ ಪ್ರಮುಖವಾಗಿರುತ್ತದೆ. ಪ್ರಕರಣಗಳನ್ನು ದಾಖಲಿಸುವುದು, ದಾಖಲಾತಿಗಳ ನಿರ್ವಹಣೆ, ಸಂಬಂಧಿಸಿದ ಇಲಾಖೆಗೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳಿಗೆ ಮಾಹಿತಿ ಒದಗಿಸುವುದು, ಅಪರಾಧಕ್ಕೆ ಒಳಗಾದ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಒದಗಿಸುವುದರ ಬಗ್ಗೆ ತಿಳಿಸಿದರು.
ಜಿಲ್ಲಾ ಆರೋಗ್ಯ ಇಲಾಖೆಯ ಕಾನೂನು ಸಲಹೆಗಾರ ವಕೀಲ ಉಮೇಶ್ ಮಾತನಾಡಿ, ಮಕ್ಕಳ ವಿರುದ್ಧ ಲೈಂಗಿಕ ಅಪರಾಧಗಳಲ್ಲಿ ತೊಡಗಿರುವವರಿಗೆ ಕಠಿಣ ಶಿಕ್ಷೆ, ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಮರಣದಂಡನೆ, ದಂಡ ಮತ್ತು ಜೈಲು ಶಿಕ್ಷೆಯನ್ನು ವಿಧಿಸುವುದರ ಜೊತೆಗೆ ತಡೆಯಲು ಪ್ರಯತ್ನಿಸುತ್ತದೆ. ಮಕ್ಕಳ ಅಶ್ಲೀಲತೆ ಲೈಂಗಿಕ ದೌರ್ಜನ್ಯಗಳನ್ನು ತಡೆಗಟ್ಟುವಲ್ಲಿ ಇರುವ ಕಾನೂನಿನ ಕಾಯ್ದೆಗಳನ್ನ ಎಲ್ಲಾ ವೈದ್ಯಾಧಿಕಾರಿಗಳಿಗೂ ತಿಳಿಸಿ ಹೇಳಿದರು.
ಜಿಲ್ಲಾ ಆಸ್ಪತ್ರೆ ಸ್ತ್ರೀ ರೋಗ ತಜ್ಞೆ ಡಾ.ರೂಪಶ್ರೀ ಮಾತನಾಡಿ, ದೌರ್ಜನ್ಯಕ್ಕೆ ಒಳಗಾದ ಮಕ್ಕಳ ವೈದ್ಯಕೀಯ ಪರೀಕ್ಷೆ ನಡೆಸುವಲ್ಲಿ ಅನುಸರಿಸಬೇಕಾದ ನಿಯಮಗಳನ್ನು ಇಲಾಖೆಯ ಮಾರ್ಗದರ್ಶನದಂತೆ ಪರೀಕ್ಷಾ ವರದಿಗಳನ್ನು ಭರ್ತಿ ಮಾಡುವ ನಮೂನೆಗಳನ್ನು ವಿವರಿಸಿದರು.
ಜಿಲ್ಲಾಸ್ಪತ್ರೆ ಮೆಡಿಸನ್ ವಭಾಗದ ಫಾರಾನಿಕ್ಸ್ ತಜ್ಞ ಡಾ.ವೇಣು ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಾದ ಡಾ. ರೇಖಾ, ಡಾ. ನಾಗರಾಜ್, ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ. ಬಿ.ವಿ.ಗಿರೀಶ್, ಡಾ.ವೆಂಕಟೇಶ್, ಡಾ. ರಾಘವೇಂದ್ರ ಪ್ರಸಾದ್, ಡಾ.ಮಧುಕುಮಾರ್, ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ಜಿಲ್ಲಾ ವ್ಯವಸ್ಥಾಪಕ ಪ್ರಫುಲ್ಲ ಚಂದ್ರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಹನುಮಂತ ಗೌಡ ಪೂಜಾರ್ ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.