ಚಳ್ಳಕೆರೆ: ನಗರಂಗೆರೆ ಗ್ರಾಮದಲ್ಲಿ ಮಲ ತ್ಯಾಜ್ಯ ಸಂಸ್ಕರಣಾ ಘಟಕ ಪರಿಶೀಲನೆ
ಚಳ್ಳಕೆರೆ ತಾಲ್ಲೂಕಿನ ನಗರಂಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಗರಂಗೆರೆ ಗ್ರಾಮದಲ್ಲಿ ಸ್ಥಾಪಿಸಲಾಗಿರುವ ಮಲ ತ್ಯಾಜ್ಯ ಸಂಸ್ಕರಣಾ ಘಟಕಕ್ಜೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಹೆಚ್. ಅವರು ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಲ ತ್ಯಾಜ್ಯ ಸಂಸ್ಕರಣಾ ಘಟಕದ ಟ್ರಯಲ್ ರನ್ (Trial Run) ನಡೆಸಿ ಘಟಕದ ಕಾರ್ಯನಿರ್ವಹಣೆಯನ್ನು ಅವಲೋಕಿಸಿದ ಅವರು, ಕಾಮಗಾರಿಯ ಸ್ಥಿತಿ ಹಾಗೂ ಕಾರ್ಯಕ್ಷಮತೆ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಗ್ರಾಮ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಉಪವಿಭಾಗದ ಸಹಾಯಕ ಅಭಿಯಂತರರಿಗೆ ಸೂಚನೆ ನೀಡಿದರು.
ಪರಿಶೀಲನೆ ಸಂದರ್ಭದಲ್ಲಿ ಸ್ವಚ್ಛ ಭಾರತ ಮಿಷನ್ (ಗ್ರಾ) ಜಿಲ್ಲಾ ಐ.ಇ.ಸಿ. ಸಮಾಲೋಚಕರು, RDWSD ಕಿರಿಯ ಅಭಿಯಂತರ ತಿಪ್ಪೇಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಮ್ಮ ರಂಗಸ್ವಾಮಿ,ಪಿಡಿಒ ರಾಮಚಂದ್ರಪ್ಪ ಇತರರಿದ್ದರು





About The Author
Discover more from JANADHWANI NEWS
Subscribe to get the latest posts sent to your email.