2026–31ರ ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಪೂರ್ವ ಸಿದ್ಧತೆ ಆರಂಭ
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳ 2026–31ನೇ ಸಾಲಿನ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗವು ಪೂರ್ವ ಸಿದ್ಧತೆಗಳನ್ನು ಆರಂಭಿಸಿದೆ. ಈ ಕುರಿತು ರಾಜ್ಯ ಚುನಾವಣಾ ಆಯೋಗದ ಮಾನ್ಯ ಆಯುಕ್ತರು 26.06.2025ರಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದು ತಿಳಿದು ಬಂದಿದೆ.
2020–25ನೇ ಅವಧಿಯ ಬಹುತೇಕ ಗ್ರಾಮ ಪಂಚಾಯಿತಿಗಳ ಅವಧಿ 2026ರ ಜನವರಿಯಿಂದ ಪೂರ್ಣಗೊಳ್ಳಲು ಆರಂಭವಾಗುತ್ತಿದ್ದು, ಅವಧಿ ಮುಕ್ತಾಯಗೊಳ್ಳುವ ಪಂಚಾಯಿತಿಗಳಿಗೆ 2025ರ ಡಿಸೆಂಬರ್ ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಬೇಕಾಗಿದೆ. ಚುನಾವಣೆಗೆ ಕನಿಷ್ಠ ಆರು ತಿಂಗಳು ಮುಂಚಿತವಾಗಿ ಮತದಾರರ ಪಟ್ಟಿ ಮುದ್ರಣ ಸೇರಿದಂತೆ ಎಲ್ಲಾ ಅಗತ್ಯ ಪೂರ್ವಭಾವಿ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಸೂಚಿಸಲಾಗಿದೆ.
ಈ ಹಿನ್ನೆಲೆಯಲ್ಲಿ, ನಿಗದಿತ ಕಾಲಮಿತಿಯೊಳಗೆ ಮೀಸಲಾತಿ ಅಧಿಸೂಚನೆಯನ್ನು ಹೊರಡಿಸಿ ಅದರ ಪ್ರತಿಗಳನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ಆಯುಕ್ತರು ಕೋರಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ–1993ರ ಅಡಿಯಲ್ಲಿ ಚುನಾವಣೆ ನಡೆಸಲು ಅಗತ್ಯವಿರುವ ಎಲ್ಲಾ ಪ್ರಕ್ರಿಯೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ದೇಶನ ನೀಡಿದೆ.
ಇದಲ್ಲದೆ, ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲೆಗಳಲ್ಲಿ ಕೈಗೊಂಡಿರುವ ಪೂರ್ವ ಸಿದ್ಧತಾ ಕ್ರಮಗಳ ಕುರಿತು ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಬೇಕೆಂದು ಸೂಚಿಸಲಾಗಿದೆ.
— ಡಾ. ಎನ್. ನೋಮೇಶ್ ಕುಮಾರ್,
ನಿರ್ದೇಶಕರು (ಪಂಚಾಯತ್ ರಾಜ್) ಹಾಗೂ
ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿ,
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ.
About The Author
Discover more from JANADHWANI NEWS
Subscribe to get the latest posts sent to your email.