
ಚಳ್ಳಕೆರೆ: ರಾಜ್ಯದಲ್ಲಿ ಡಿಸೆಂಬರ್ ನಂತರ ಕಾಂಗ್ರೆಸ್ ಸರ್ಕಾರ ಪತನಗೊಂಡು ಸುಮಾರು 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದರು.
















ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಪಕ್ಷದ ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದುರಾಡಳಿತ ನಡೆಸುತ್ತಿದ್ದು ರಾಜ್ಯದ ಜನತೆ ಗ್ಯಾರಂಟಿ ಯೋಜನೆಗಳಿಂದ ಬೇಸತ್ತು ಹಿಡಿ ಶಾಪ ಹಾಕುತ್ತಿದ್ದಾರೆ ಬೆಲೆ ಏರಿಕೆ ರೈತರ ಆತ್ಮಹತ್ಯೆ ಮಹಿಳೆಯರ ಮೇಲಿನ ಅತ್ಯಾಚಾರ ಎಸ್ ಸಿ ಎಸ್ ಟಿ ನಿಗಮಗಳ ಸುಮಾರು 34,000 ಕೋಟಿ ಹಣವನ್ನು ಬಳ್ಳಾರಿ ಚುನಾವಣೆಗೆ ಬಳಸಿರುವುದು ಕಾಂಗ್ರೆಸ್ ಸರ್ಕಾರದ ಸಾಧನೆಗಳಾಗಿದ್ದು ಇಂದು ಗ್ಯಾರಂಟಿ ಯೋಜನೆಗಳಿಂದ ಬೆಲೆ ಏರಿಕೆಯಾಗಿದ್ದು ಮಹಿಳೆಯರಿಗೆ ಮನೆ ನಡೆಸಲು ಸಹ ಕಷ್ಟವಾಗುತ್ತಿದೆ ಈ ಸರ್ಕಾರದ ಸಾಧನೆ ಶೂನ್ಯವಾಗಿದ್ದು ಮುಂದಿನ ದಿನಗಳಲ್ಲಿ ಜೆಡಿಎಸ್ ಬಿಜೆಪಿ ಒಂದಾಗಿದ್ದು ಎರಡು ಪಕ್ಷಗಳ ಕಾರ್ಯಕರ್ತರು ಒಂದೇ ತಾಯಿಯ ಮಕ್ಕಳಿದ್ದಂತೆ ಟಿಕೆಟ್ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧರಿಸಲಿದ್ದು ಪಕ್ಷವು ಯಾರಿಗೆ ಟಿಕೆಟ್ ಘೋಷಣೆ ಮಾಡಿದರು ಒಗ್ಗಟ್ಟಾಗಿ ಪಕ್ಷದ ಕಾರ್ಯಕರ್ತರು ಅಭ್ಯರ್ಥಿಯ ಪರ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವತ್ತ ಗಮನಹರಿಸಬೇಕು. ಬಿಜೆಪಿ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿ ಇಲ್ಲದಿದ್ದರೂ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸಿ ಮತ ಕೇಳಬೇಕು ಭಾರತದ ಆರ್ಥಿಕ ಸ್ಥಿತಿ ಇಂದು ಉತ್ತಮವಾಗಿದ್ದು ಜಿಡಿಪಿ ದರದಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
ಪಕ್ಷಕ್ಕೆ ಆನೆ ಬಲ: ಟಿಟಿ ಕುಮಾರಸ್ವಾಮಿಯವರನ್ನು ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಿರುವುದರಿಂದ ಚಳ್ಳಕೆರೆ ತಾಲೂಕಿನ ಕಾರ್ಯಕರ್ತರಿಗೆ ಆನೆ ಬಲಬಂದಂತಾಗಿದ್ದು ಶಾಸಕರ ಯಾವುದೇ ಬೆದರಿಕೆಗಳಿಗೆ ಬಗ್ಗದೆ ಪಕ್ಷದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ ಜನರ ಸಮಸ್ಯೆಗಳನ್ನು ಅರಿತು ಬಗೆಹರಿಸುವ ಕಾರ್ಯದಲ್ಲಿ ತೊಡಗಿಕೊಂಡು ಪಕ್ಷವನ್ನು ಚಳ್ಳಕೆರೆ ತಾಲೂಕಿನಲ್ಲಿ ಅಧಿಕಾರಕ್ಕೆ ತರಲು ಪ್ರಯತ್ನಿಸಿ ಎಂದು ಕಿವಿಮಾತು ಹೇಳಿದರು.
ಮಾಜಿ ಶಾಸಕ ಜಿಹೆಚ್ ತಿಪ್ಪಾರೆಡ್ಡಿ ಮಾತನಾಡಿ ಸ್ವಾತಂತ್ರ್ಯ ಬಂದಾಗಿಂದ ಒಂದು ಪಕ್ಷವು ಕಳೆದ 30 40 ವರ್ಷಗಳಿಂದ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಬದಲಾವಣೆ ಮಾಡಿಲ್ಲ ಆದರೆ ಬಿಜೆಪಿ ಪಕ್ಷ ಶಿಸ್ತಿನ ಪಕ್ಷವಾಗಿದ್ದು ಪ್ರತಿ ಮೂರು ವರ್ಷಗಳಿಗೊಮ್ಮೆ ರಾಷ್ಟ್ರದಿಂದ ಹಿಡಿದು ಗ್ರಾಮೀಣ ಮಟ್ಟದವರೆಗೂ ಪಕ್ಷದ ಅಧ್ಯಕ್ಷರನ್ನು ಬದಲಾವಣೆ ಮಾಡಿ ಹೊಸ ಮುಖಗಳಿಗೆ ಅವಕಾಶ ನೀಡುತ್ತದೆ. ಬಿಜೆಪಿ ಪಕ್ಷವು ರಾಜ್ಯದಲ್ಲಿ ಅಧಿಕಾರ ಬಂದಾಗೆಲ್ಲ 20 20 ಸರ್ಕಾರದಲ್ಲಿ ಅಧಿಕಾರ ನಡೆಸಿದೆ ಇದು ಒಂದು ಬೇಸರದ ಸಂಗತಿಯಾಗಿದ್ದು ಪಕ್ಷವು ಅಧಿಕಾರಕ್ಕೆ ಬಂದಾಗ ಬೇರೆ ಜಿಲ್ಲೆಯವರು ಜಿಲ್ಲಾ ಉಸ್ತುವಾರಿ ಮಂತ್ರಿಗಳಾಗುವುದರಿಂದ ಜಿಲ್ಲೆಯ ಸಮಸ್ಯೆಗಳು ಹಾಗೆ ಹರಿದಿರಲಿಲ್ಲ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗ ಸಣ್ಣ ಸಮುದಾಯಗಳನ್ನು ಗುರುತಿಸಿ ಅರ್ಹತೆಗೆ ತಕ್ಕಂತೆ ಅಧಿಕಾರ ನೀಡಿದಾಗ ಎಲ್ಲಾ ಸಮುದಾಯಗಳು ಬಿಜೆಪಿ ಪಕ್ಷವನ್ನು ಬೆಂಬಲಿಸಲಿದೆ ಮುಂದಿನ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಪಕ್ಷವನ್ನು ಬಲಗೊಳಿಸುವ ಮೂಲಕ ಅಧಿಕಾರಕ್ಕೆ ತರುವ ಗುರಿ ಹೊಂದಬೇಕು ಎಂದು ತಿಳಿಸಿದರು.
ನೂತನ ಜಿಲ್ಲಾಧ್ಯಕ್ಷ ಕೆ ಟಿ ಕುಮಾರಸ್ವಾಮಿ ಮಾತನಾಡಿ ಬಿಜೆಪಿಯಲ್ಲಿ ಅಧ್ಯಕ್ಷ ಸ್ಥಾನ ದೊರೆಯುವುದು ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸಿದಂತಾಗುತ್ತದೆ ಬಿಜೆಪಿಯ ತತ್ವ ಸಿದ್ಧಾಂತಗಳನ್ನು ದೇಶದ ಜನತೆ ಮೆಚ್ಚಿರುವುದರಿಂದ ದೇಶದ ಜನತೆಯ ಆಶೀರ್ವಾದದಿಂದ ಕೇಂದ್ರದಲ್ಲಿ ಕಳೆದ ಮೂರು ಬಾರಿ ಅಧಿಕಾರ ಹಿಡಿದಿದೆ ಚಳ್ಳಕೆರೆ ಕ್ಷೇತ್ರದಲ್ಲಿ ಕಳೆದ ಮೂರು ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಸೋತಿದೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ ಶಾಸಕ ರಘುಮೂರ್ತಿಯವರ ಲೋಪದೋಷಗಳನ್ನು ಜನತೆಗೆ ಮನವರಿಕೆ ಮಾಡಿಕೊಡುವ ಮೂಲಕ ತಾಲೂಕಿನಲ್ಲಿ ಪಕ್ಷದ ಕಾರ್ಯಕರ್ತರು ಸಕ್ರಿಯವಾಗಬೇಕು ದಿನನಿತ್ಯ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವ ಪತ್ರಕರ್ತರಿಗೆ ನಿವೇಶನ ನೀಡುವಲ್ಲಿ ಶಾಸಕರು ವಿಳಂಬ ನೀತಿ ತೋರಿರುವುದು ಸರಿಯಲ್ಲ ಬಡವರಿಗೆ ನಿವೇಶನಗಳನ್ನು ಹಂಚಲು ಮಾಜಿ ಶಾಸಕ ತಿಪ್ಪೇಸ್ವಾಮಿ ಮುಂದಾಗಿದ್ದರು ಆದರೆ ಶಾಸಕ ರಘು ಮೂರ್ತಿಯವರು ಮನೆಗಳನ್ನು ನಿರ್ಮಿಸಿದ್ದರು ಬಡವರಿಗೆ ಉಪಯೋಗವಾಗಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ನೂತನ ತಾಲೂಕು ಅಧ್ಯಕ್ಷರಾಗಿ ಸುರೇಶ್ ರವರಿಗೆ ಮಾಜಿ ಅಧ್ಯಕ್ಷ ಸೋರನಹಳ್ಳಿ ಶ್ರೀನಿವಾಸ್ ರವರು ಬಿಜೆಪಿ ಪಕ್ಷದ ಬಾವುಟ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ನೂತನ ತಾಲೂಕು ಬಿಜೆಪಿ ಅಧ್ಯಕ್ಷ ಸುರೇಶ್ ಮಾಜಿ ಜಿಲ್ಲಾಧ್ಯಕ್ಷ ಮುರಳಿ ಮುಖಂಡರಾದ ರಾಮದಾಸ್ ಹನುಮಂತೇಗೌಡ ಸೋಮಶೇಖರ್ ಮಂಡಿಮಠ ಎನ್ ರಘುಮೂರ್ತಿ ಜಯಪಾಲಯ್ಯ ಸಂಪತ್ ಜಯಣ್ಣ ವೆಂಕಟೇಶ್ ಸಾಕಮ್ಮ ಪಾಲಮ್ಮ ಆದಿ ಭಾಸ್ಕರ ಶ್ರೇಷ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.