July 30, 2025
1753787686509.jpg


ಹೊಸದುರ್ಗಜುಲೈ29:
ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿಯಲ್ಲಿ ಕಾರ್ಯಾತ್ಮಕ ಗೃಹ ನಳ ಸಂಪರ್ಕದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೊಸದುರ್ಗ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಸೋಮವಾರ ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನದ ಕುರಿತು 15 ದಿನಗಳ “ಕ್ಷೇತ್ರ ಭೇಟಿ ಪರಿಶೀಲನಾ ಆಂದೋಲನದ ಅಂಗವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಲೆ ಮತ್ತು ಅಂಗನವಾಡಿಗಳಿಗೆ ಕಡ್ಡಾಯವಾಗಿ ಕಾರ್ಯಾತ್ಮಕ ನಳ ಸಂಪರ್ಕ ಕಲ್ಪಿಸಬೇಕು. ಗ್ರಾಮಗಳಲ್ಲಿ ಚರಂಡಿಗಳನ್ನು ಸ್ವಚ್ಛತೆಯಿಂದ ಕಾಪಾಡಿಕೊಳ್ಳಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಹೊಸದುರ್ಗ ತಾಲ್ಲೂಕಿನ ದೇವಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಿಗೆರೆ, ಗುತ್ತಿಕಟ್ಟೆ, ಬಿಸನಹಳ್ಳಿ ಲಂಬಾಣಿಹಟ್ಟಿ, ಹೆಬ್ಬಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರು, ಮಧುರೆ ಗ್ರಾಮ ಪಂಚಾಯಿತಿಯ ಮಧುರೆ, ಚಿನ್ನಾಪುರ ಮತ್ತು ಕೆಲ್ಲೋಡು ಗ್ರಾಮ ಪಂಚಾಯಿತಿಯ ಮೆಟ್ಟಿನಹೊಳೆ ಗ್ರಾಮಕ್ಕೆ ಭೇಟಿ ನೀಡಿ, ಜೆಜೆಎಂ ಯೋಜನೆಯಡಿ ಅಳವಡಿಸಿರುವ ಗೃಹ ನಳ ಸಂಪರ್ಕದ ಗುಣಮಟ್ಟ, ಮೀಟರ್ ಅಳವಡಿಕೆ, ಕುಡಿಯುವ ನೀರಿನ ಪೂರೈಕೆ, ರಸ್ತೆ ಪುನಶ್ಚೇತನ ಹಾಗೂ ಎಫ್‍ಟಿಕೆ-ನೀರಿನ ಗುಣಮಟ್ಟ ಸೇರಿದಂತೆ ಇತರೆ ವರದಿಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಬಸವನಗೌಡ ಪಾಟೀಲ್, ಜಲಜೀವನ್ ಮಿಷನ್ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕ ಮಂಜುನಾಥ ಎಸ್ ನಾಡರ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್, ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರಸನ್ನ ಕುಮಾರ್ ಸೇರಿದಂತೆ ಸಹಾಯಕ ಅಭಿಯಂತರರು, ಕಿರಿಯ ಅಭಿಯಂತರರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ನೀರುಗಂಟಿಗಳು ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading