July 29, 2026
IMG-20260729-WA0308



ನಾಯಕನಹಟ್ಟಿ, ಜು. 29: ಕಾಯಕಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪುಣ್ಯಕ್ಷೇತ್ರದಲ್ಲಿ ತಹಶೀಲ್ದಾರನಾಗಿ ಸೇವೆ ಸಲ್ಲಿಸಿದ್ದು ನನ್ನ ಜೀವನದ ಪುಣ್ಯದ ಕ್ಷಣವಾಗಿದೆ. ಶ್ರೀ ಗುರು ತಿಪ್ಪೇರುದ್ರಸ್ವಾಮಿಯ ಪರಮ ಭಕ್ತನಾಗಿದ್ದು, ಅವರ ಆಶೀರ್ವಾದದಿಂದ ರಾಜ್ಯದಲ್ಲಿ ಉತ್ತಮ ಮಳೆ, ಸಮೃದ್ಧ ಬೆಳೆ ಹಾಗೂ ಜನರಿಗೆ ಸುಖ-ಶಾಂತಿ ನೆಲೆಸಲಿ ಎಂದು ಪ್ರಾರ್ಥಿಸಿದ್ದೇನೆ ಎಂದು ನಿವೃತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಟಿ.ಸಿ. ಕಾಂತರಾಜ್ ಹೇಳಿದರು.
ಬುಧವಾರ ಪಟ್ಟಣದ ಒಳಮಠದಲ್ಲಿರುವ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.
“ಮಾಡಿದಷ್ಟು ನೀಡು ಭಿಕ್ಷೆ” ಎಂಬ ಶ್ರೀ ಗುರು ತಿಪ್ಪೇರುದ್ರಸ್ವಾಮಿಯ ವಾಣಿಯು ಜೀವನದಲ್ಲಿ ಸದಾ ಮಾರ್ಗದರ್ಶಕವಾಗಿದೆ. ಈ ಪವಿತ್ರ ಕ್ಷೇತ್ರದಲ್ಲಿ ತಹಶೀಲ್ದಾರನಾಗಿ ಕರ್ತವ್ಯ ನಿರ್ವಹಿಸಲು ಅವಕಾಶ ದೊರೆತಿರುವುದು ನನ್ನ ಭಾಗ್ಯ. ಶ್ರೀಗಳ ಕೃಪೆಯಿಂದ ನಾಡಿನಲ್ಲಿ ಉತ್ತಮ ಮಳೆಯಾಗಿ ರೈತರಿಗೆ ಸಮೃದ್ಧ ಬೆಳೆ ದೊರೆಯಲಿ ಎಂದು ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡ ಎಂ.ವೈ.ಟಿ. ಸ್ವಾಮಿ, ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಚ್. ಗಂಗಾಧರಪ್ಪ, ನಟರಾಜ್, ನವೀನ್ ಕುಮಾರ್, ನವೀನ್, ಕಂದಾಯ ನಿರೀಕ್ಷಕ ಚೇತನ್ ಕುಮಾರ್, ದೇವಸ್ಥಾನದ ಸಿಬ್ಬಂದಿಗಳಾದ ಎಸ್. ಸತೀಶ್, ಮನು, ಗ್ರಾಮ ಲೆಕ್ಕಾಧಿಕಾರಿಗಳಾದ ಜಗದೀಶ್ ಹಾಗೂ ಯಶವಂತ ಕುಮಾರ್, ಗ್ರಾಮ ಸಹಾಯಕರಾದ ನಾಗರಾಜ್ ಕುಮಾರ್ ಮತ್ತು ತಿಪ್ಪೇಸ್ವಾಮಿ, ಸಿಬ್ಬಂದಿಗಳಾದ ಮಹದೇವ, ಶಿವಣ್ಣ, ಶಿವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading