ಚಳ್ಳಕೆರೆ:ತಾಲೂಕಿನ ನಗರ ಹಾಗೂ ಗ್ರಾಮೀಣ ಭಾಗಗಳ ಪೆಟ್ಟಿಗೆ ಅಂಗಡಿಗಳಲ್ಲಿ ಅನಧಿಕೃತವಾಗಿ ನಡೆಯುವ ಅಕ್ರಮ ಮಧ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಮುಖಂಡರು ಅಬಕಾರಿ ಇಲಾಖೆ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.
ನಗರದ ಅಬಕಾರಿ ಇಲಾಖೆ ಅಧಿಕಾರಿಗಳನ್ನು ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿ ಮಾತನಾಡಿದ ಸಂಘಟನೆಯ ಅಧ್ಯಕ್ಷ ಮಂಜುನಾಥ್ ನಗರದ ಬಾರ್ ಗಳ ಮೂಲಕ ಮಧ್ಯದ ಬಾಕ್ಸ್ ಗಳ ಮೂಲಕ ತಂಪು ಪಾನೀಯಗಳ ರೀತಿಯಲ್ಲಿ ಸರಬರಾಜು ಡುತ್ತಿದ್ದು ಇದಕ್ಕೆ ಮುಖ್ಯವಾಗಿ ಪಂಚಾಯಿತಿಯ ಅಧಿಕಾರಿಗಳು ನೆಪ ಮಾತ್ರಕ್ಕೆ ಕಾನೂನು ಲೆಕ್ಕದಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದು ಪ್ರಾಮಾಣಿಕವಾಗಿ ಗಮನಹರಿಸಿದರೆ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮಧ್ಯ ಮಾರಾಟವನ್ನು ನಿಲ್ಲಿಸಬಹುದು ಡಾಬ ಹೋಟೆಲ್ ಗಳಲ್ಲಿ ಕೂಡ ಮಧ್ಯದ ಬಾಟಲ್ ಗಳು ಸರಬರಾಜು ಆಗುತ್ತಿದ್ದು ಇದರಿಂದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಯುವಕರು ಕುಡಿತಕ್ಕೆ ಬಲಿಯಾಗುತ್ತಿರುವುದನ್ನು ಕಾಣುತ್ತಿದ್ದೇವೆ ಇಂತಹ ಪ್ರಕರಣಗಳಿಂದ ಅನೇಕ ಕುಟುಂಬಗಳು ಬೀದಿ ಪಾಲಾಗುತ್ತಿದ್ದು ಅಬಕಾರಿ ಇಲಾಖೆ ಅಧಿಕಾರಿಗಳು ಇಂತಹ ಅಕ್ರಮ ಮಧ್ಯ ಮಾರಾಟ ಮಾಡುವ ಗೂಡಂಗಡಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಗೌರವಾಧ್ಯಕ್ಷ ಸಿ ಬೋಜರಾಜ ಪ್ರಧಾನ ಕಾರ್ಯದರ್ಶಿ ಚಂದ್ರಣ್ಣ ಸಂಘಟನಾ ಕಾರ್ಯದರ್ಶಿ ಮುರಳಿ ಗಿರೀಶ್ ಕಾರ್ಮಿಕ ಘಟಕದ ಅಧ್ಯಕ್ಷ ಮಂಜುನಾಥ ಉಪಸ್ಥಿತರಿದ್ದರು
About The Author
Discover more from JANADHWANI NEWS
Subscribe to get the latest posts sent to your email.