ವರದಿ:ನಾಗತಿಹಳ್ಳಿ ಮಂಜುನಾಥ್
ಹೊಸದುರ್ಗ:ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಅನುಷ್ಠಾನಗೊಂಡಿದ್ದು, ಸರ್ಕಾರಿ ನೌಕರರು ಹಾಗೂ ಶಿಕ್ಷಕರ ಹಳೆ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ಸರ್ಕಾರ ಬದ್ಧವಾಗಿದೆ. ಪದವೀಧರ ಯುವಕರಿಗಾಗಿ ಯುವನಿಧಿ ಯೋಜನೆಯನ್ನೂ ಜಾರಿಗೊಳಿಸಲಾಗಿದೆ. ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಆಗ್ನೇಯ ಪದವೀಧರರ ಕ್ಷೇತ್ರ (ವಿಧಾನ ಪರಿಷತ್)ದ ಕಾಂಗ್ರೇಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್ ತಿಳಿಸಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೊಸದುರ್ಗದಲ್ಲಿ ೫,೨೭೧ ನೋಂದಾಯಿತ ಪದವೀಧರ ಮತದಾರರಿದ್ದು, ಗ್ರಾಮ ಪಂಚಾಯಿತಿ ಮತ್ತು ಹೋಬಳಿ ಮಟ್ಟದಲ್ಲಿ ಸಂಘಟನೆ ಬಲಪಡಿಸಲಾಗುತ್ತಿದೆ. ಶ್ರೀರಾಮಪುರ, ಮತ್ತೋಡು ಹಾಗೂ ಕಸಬ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ತಂಡಗಳನ್ನು ರಚಿಸಿ ಮತದಾರರನ್ನು ವೈಯಕ್ತಿಕವಾಗಿ ಸಂಪರ್ಕಿಸಬೇಕು. ಪ್ರತಿಯೊಬ್ಬ ಪ್ರಮುಖ ಕಾರ್ಯಕರ್ತ ಕನಿಷ್ಠ ೫೦ ಮತದಾರರನ್ನು ಸಂಪರ್ಕಿಸಿ ಬೆಂಬಲ ಪಡೆಯುವಂತೆ ಮನವಿ ಮಾಡಿದರು.
ಆಗ್ನೇಯ ಪದವೀಧರ ಕ್ಷೇತ್ರವು ೩೪ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವುದರಿAದ ಎಲ್ಲ ಪ್ರದೇಶಗಳಿಗೆ ಪದೇಪದೇ ಭೇಟಿ ನೀಡುವುದು ಕಷ್ಟ. ಹೀಗಾಗಿ ಮುಂದಿನ ೨೦–೨೩ ದಿನಗಳಲ್ಲಿ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ವ್ಯಾಪ್ತಿಯಲ್ಲಿ ಸಕ್ರಿಯವಾಗಿ ಪ್ರಚಾರ ನಡೆಸಬೇಕು. ಮೊದಲ ಪ್ರಾಶಸ್ತ್ಯದ ಮತಗಳಿಗೆ ಹೆಚ್ಚಿನ ಆದ್ಯತೆ ನೀಡುವುದರ ಜತೆಗೆ ಅಗತ್ಯವಿದ್ದಲ್ಲಿ ಎರಡನೇ ಪ್ರಾಶಸ್ತ್ಯದ ಮತಗಳನ್ನೂ ಖಚಿತಪಡಿಸಿಕೊಳ್ಳುವಂತೆ ಮನವಿ ಮಾಡಿದ ಅವರು ಕಾಂಗ್ರೆಸ್ ಅಧಿಕೃತವಾಗಿ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಶಶಿ ಹುಲಿಕುಂಟೆಮಠ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿರುವುದು ೨೦೨೫ರ ಡಿಸೆಂಬರ್‌ನಲ್ಲೇ ಪ್ರಕಟವಾಗಿತ್ತು ಎಂದರು.
ನಾಮಪತ್ರ ಸಲ್ಲಿಕೆಗೆ ಮುಖಂಡರ ಆಗಮನ: ಬೆಂಗಳೂರಿನ ಶಾಂತಿನಗರದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವ ಕಾರ್ಯಕ್ರಮ ನಡೆಯಲಿದ್ದು, ಶಶಿ ಹುಲಿಕುಂಟೆಮಠ ಹಾಗೂ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಬೆಂಬಲ ನೀಡುವ ನಿರೀಕ್ಷೆಯಿದ್ದು, ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಈ ಸಂಧರ್ಬದಲ್ಲಿ ಶಾಸಕ ಬಿ.ಜಿ.ಗೋವಿಂದಪ್ಪ ಸೇರಿದಂತೆ ಪಕ್ಷದ ಮುಖಂಡರುಗಳು ಜನಪ್ರತಿನಿಧಿಗಳು ಉಪಸ್ಧಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.