December 14, 2025
img_1_1761744926017.jpg

ಚಿತ್ರದುರ್ಗಅ.29:
ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟನ್ರ್ಷಿಪ್ ಅವಕಾಶ ಕಲ್ಪಿಸಿದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು.
ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 2021-2022, 2022-23, 2023-24 ಹಾಗೂ 2024-2025ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷೆ ಶ್ರೀಮತಿ ಆಯೇಶಾ ಖಾನಂ ತಿಳಿಸಿದ್ದಾರೆ.
ಒಟ್ಟು 21 ಅಭ್ಯರ್ಥಿಗಳಿಗೆ ಇಂಟನ್ರ್ಷಿಪ್ ಅವಕಾಶ ಒದಗಿಸಲಾಗುವುದು. ಅದರ ವಿವರ ಹೀಗಿದೆ: ಮಹಿಳಾ ಆಯವ್ಯಯದಡಿ 08 ಮಹಿಳೆಯರು, ಪರಿಶಿಷ್ಟ ಜಾತಿ ಉಪಯೋಜನೆಯಡಿ 09 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟನ್ರ್ಷಿಪ್ಗೆ ಅವಕಾಶ ಕಲ್ಪಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಇಂಟನ್ರ್ಷಿಪ್ಗೆ ಅವಕಾಶ ಕಲ್ಪಿಸಲಾಗುವುದು. ಇಂಟನ್ರ್ಷಿಪ್ಗೆ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ 20,000/- ರೂ. ಸ್ಟೈಪೆಂಡ್ ನೀಡಲಾಗುವುದು. ಅಭ್ಯರ್ಥಿಗಳು ತಮ್ಮ ಸ್ವವಿವರ (Curriculum Vitae) ದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://forms.gle/Qth3f5FjMHXSxTB68 ರಲ್ಲಿ ಅರ್ಜಿ ಸಲ್ಲಿಸುವುದು.
ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ. ಅರ್ಜಿ ಸಲ್ಲಿಸಲು 2025 ರ ನವೆಂಬರ್ 15 ಕೊನೆಯ ದಿನವಾಗಿದೆ ಎಂದು ಅವರು ತಿಳಿಸಿದ್ದಾರೆ.
========

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading