ಚಳ್ಳಕೆರೆ ಅ.,29ಸರಕಾರ ಮಾಡಬೇಕಾದ ಕೆಲದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕಧರ್ಮಾಧಿಕಾರಿಗಳು ಮಾಡುತ್ತಿದ್ದಾರೆ ಎಂದು ಗ್ರಾಪಂ ಅಧ್ಯಕ್ಷ ಅರುಣ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು.






ಚಳ್ಳಕೆರೆ ತಾಲೂಕಿನ ಬೇಡರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಬಂಜಗೆರೆ ಗ್ರಾಮದ ಗಂಗಮ್ಮ ಇವರಿಗೆ ಗ್ರಾಮೀಣಾಭಿವೃದ್ಧಿ ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ನಿರ್ಮಿಸಿದ ಮನೆ ಹಸ್ತಾಂತರ ಮಾಡಿ ಮಾತನಾಡಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ
ಮಾತೃಶ್ರೀ ಹೇಮಾವತಿ ಅಮ್ಮನವರ ಮಾರ್ಗದರ್ಶನದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿಸಮಾಜದಲ್ಲಿರುವ ಅತಿ ದುರ್ಬಲ ಮತ್ತು ಅಸಹಾಯಕ ಸ್ಥಿತಿಯಲ್ಲಿರುವ ಕುಟುಂಬಗಳನ್ನು ಗುರುತಿಸಿ ಅವರ ಜೀವನ ನಿರ್ವಹಣೆಗೆ ಬೇಕಾದ ಮಾಶಾಸನ ಹಾಗೂ ಅಗತ್ಯಕ್ಕೆ ಅನುಕೂಲವಾಗುವಂತೆ ವಾತ್ಸಲ್ಯ ಕಿಟ್ ಗಳನ್ನು ಕೊಡುವುದರೊಂದಿಗೆ ಸೂರು ಇಲ್ಲದವರಿಗೆ ಸ್ವಂತ ಸೂರು ನಿರ್ಮಾಣ ಮಾಡಿ ಕೊಡುವುದು ಶ್ಲಾಘನೀಯ ಎಂದು ತಿಳಿಸಿದರು.
ಜಿಲ್ಲಾ ಯೋಜನೆಯ ನಿರ್ದೇಶಕ ಪ್ರವೀಣ್ ಕುಮಾರ್.ಸದಸ್ಯರಾದ ವೇಣುಗೋಪಲರೆಡ್ಡಿ.ತಿಮ್ಮಯ್ಯ.ಶಶಿರೇಖ ಇತರರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.