
ಚಿತ್ರದುರ್ಗ. ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಬೇಕು. ಕಾಮಗಾರಿ ಪ್ರಾರಂಭಿಸಿದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜಲಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಗಳಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ‘ಮನೆ ಮನೆಗೆ ಗಂಗೆ ಕಾಮಗಾರಿಗಳಿಗೆ ಕಾರ್ಯದೇಶ ನೀಡಿದರು ಸಹ ಕೆಲ ಗುತ್ತಿಗೆದಾರರು ಕಾಮಗಾರಿ ಪ್ರಾರಂಭಿಸದ ದೂರುಗಳು ಬಂದಿವೆ. ಅಂತಹ ಗುತ್ತಿಗೆದಾರರ ವಿರುದ್ಧ ಟೆಂಡರ್ ನಿಯಮಾನಸಾರ ಕಟ್ಟುನಿಟ್ಟಿನ ಕ್ರಮ ಜರುಗಿಸಿ’ ಎಂದರು.

‘ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ಪ್ರಥಮಾದ್ಯತೆ ಮೇರೆಗೆ ಮನೆ ಮನೆಗೆ ಗಂಗೆ ಹಾಗೂ 128 ಶಾಲಾ ಮತ್ತು ಅಂಗನವಾಡಿ ಕೇಂದ್ರ ಹಾಗೂ 199 ಆಯುಷ್ಮಾನ್ ಆರೋಗ್ಯ ಕೇಂದ್ರಗಳಿಗೆ ಹತ್ತು ದಿನದೊಳಗೆ ನಳ ಸಂಪರ್ಕ ಕಲ್ಪಿಸಬೇಕು. ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ರಚಿಸಬೇಕು’ ಎಂದು ತಿಳಿಸಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಬಸವನಗೌಡ ಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್, ಜಿಲ್ಲಾ ನಿರೂಪಣಾಧಿಕಾರಿ ವಿಜಯ ಕುಮಾರ್ ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.