ಚಿತ್ರದುರ್ಗ. ನ.29:
2024-25ನೇ ಸಾಲಿಗೆ 5 ವಾರದ ಕೋಳಿ ಮರಿಗಳನ್ನು ಉತ್ಪಾದಿಸಿ ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ತಲಾ 20ರಂತೆ ಕೋಳಿ ಮರಿಗಳನ್ನು ವಿತರಿಸಿ ಆದಾಯ ಹೆಚ್ಚಿಸುವ ಕಾರ್ಯಕ್ರಮ ಅನುಷ್ಟಾನಗೊಳಿಸುತ್ತಿದ್ದು, ಈ ಸಂಬಂಧ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನ.
ರೈತ ಮಹಿಳೆಯರು, ಸ್ವ-ಸಹಾಯ ಗುಂಪಿನ ಸದಸ್ಯರು, ಪ್ರಾಥಮಿಕ ಕೋಳಿ ಸಹಕಾರ ಸಂಘಗಳಲ್ಲಿರುವ ಮಹಿಳಾ ಸದಸ್ಯರು ಮತ್ತು ರೈತ ಉತ್ಪಾದಕ ಸಂಸ್ಥೆಯ ಅರ್ಹ ಫಲಾನುಭವಿಗಳು ಅರ್ಜಿಗಳನ್ನು ಅಗತ್ಯ ಸೂಕ್ತ ದಾಖಲೆಗಳೊಂದಿಗೆ ಆಯಾ ತಾಲ್ಲೂಕಿನ ಪಶು ವೈದ್ಯಾಧಿಕಾರಿ(ಆಡಳಿತ) ಅಥವಾ ಸಹಾಯಕ ನಿರ್ದೇಶಕರಿಗೆ ಸಲ್ಲಿಸಲು ಸೂಚಿಸಿದೆ.