
ಚಿತ್ರದುರ್ಗ ನ.29:
ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ವಿಡಿಯೋ ಕಾನ್ಪರೆನ್ಸ್ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಕಂದಾಯ ವಿಷಯಗಳು ಬಗರ್ ಹುಕುಂ, ನಮೂನೆ 1 ರಿಂದ 54 ಪ್ರಕರಣ, ಕಂದಾಯ ಗ್ರಾಮಗಳ ರಚನೆ ಹಕ್ಕುಪತ್ರ ವಿತರಣೆ, ನ್ಯಾಯಾಲಯ ಪ್ರಕರಣ ವಿಲೇವಾರಿ, ವಿಪತ್ತು ನಿರ್ವಹಣೆ, ಪರಿಹಾರ ವಿತರಣೆ ಹಾಗೂ ಇತರೆ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆ ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಪಹಣಿ-ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾದ್ಯತೆಯಾಗಿ ಪರಿಗಣಿಸಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು. ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಸರ್ಕಾರಿ ಆಸ್ತಿಗಳನ್ನು ಗುರುತಿಸಿ, ಹದ್ದುಬಸ್ತು ಮಾಡಿಕೊಂಡು ಲ್ಯಾಂಡ್ ಬೀಟ್ ದತ್ತಾಂಶದಲ್ಲಿ ಅಪ್‍ಲೋಡ್ ಕಾರ್ಯಕ್ರಮದಲ್ಲಿ ಉತ್ತಮ ಸಾಧನೆ ತೋರಬೇಕು. ತ್ವರಿತವಾಗಿ ಗುರಿ ಸಾಧಿಸಲು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಸೇರಿದಂತೆ ತಹಶೀಲ್ದಾರ್‍ಗಳು, ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.

About The Author
Discover more from JANADHWANI NEWS
Subscribe to get the latest posts sent to your email.