ವರದಿ-: ಕೆ.ಟಿ. ಓಬಳೇಶ್ ನಲಗೇತನಹಟ್ಟಿ.
ನಾಯಕನಹಟ್ಟಿ,-: ಗ್ರಾಮೀಣ ಪ್ರದೇಶದ ಬಡ ಜನರಿಗೆ ಉಚಿತ ತಪಾಸಣೆ ಶಿಬಿರ ವರದಾನವಾಗಿದೆ ಎಂದು ಪಟ್ಟಣ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಟಿ ಮಂಜುಳಾ ಶ್ರೀಕಾಂತ್ ಹೇಳಿದರು.

ಶನಿವಾರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ಹಾಗೂ ಮದರ್ ತೆರೇಸಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವತಿಯಿಂದ ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಹೃದಯ ರೋಗ ನರರೋಗ ಕ್ಯಾನ್ಸರ್ ಮೂತ್ರಪಿಂಡದ ಕಲ್ಲು ಕಾಯಿಲೆಗಳ ಉಚಿತ ತಪಾಸಣೆ ಶಿಬಿರಕ್ಕೆ ಸಸಿಗೆ ನೀರಿರುವ ಮೂಲಕ ಉದ್ಘಾಟಿಸಿ ಚಾಲನೆ ನೀಡಿ ಮಾತನಾಡಿದರು ಗ್ರಾಮೀಣ ಪ್ರದೇಶದ ಕಡು ಬಡವರಿಗೆ ಇಂಥ ಉಚಿತ ತಪಾಸಣೆ ಶಿಬಿರಗಳು ವರದಾನವಾಗಿವೆ ಕರವೇ ಕನ್ನಡ ಸೇನೆ ಪದಾಧಿಕಾರಿಗಳು ಇಂಥ ಸೇವೆಗೆ ನಮ್ಮ ಸಹಕಾರ ಸದಾ ಇರುತ್ತೆ ಇನ್ನು ಈ ಭಾಗದಲ್ಲಿ ಇಂತಹ ಶಿಬಿರಗಳು ಹೆಚ್ಚಿನದಾಗಿ ನಡೆಯಲಿ ಬಡಜನರ ಆರೋಗ್ಯ ಉತ್ತಮವಾಗಿರಲಿ ಎಂದರು.
ಪಟ್ಟಣ ಪಂಚಾಯತಿ ಸದಸ್ಯ ಜಿಲ್ಲಾ ಯೂನಿಯನ್ ಬ್ಯಾಂಕ್ ಉಪಾಧ್ಯಕ್ಷ ಜೆ ಆರ್. ರವಿಕುಮಾರ್ ಮಾತನಾಡಿದರು. ಹುಬ್ಬಳ್ಳಿಯ ಸಾರ್ವಜನಿಕರು ಇಂತಹ ಉಚಿತ ತಪಾಸಣೆ ಶಿಬಿರದಲ್ಲಿ ಹೆಚ್ಚಿನದಾಗಿ ಭಾಗವಹಿಸಿ ತಮ್ಮ ಆರೋಗ್ಯದ ಕಡೆ ಗಮನಹರಿಸಬೇಕು ವೈದ್ಯರು ನೀಡಿದಂತಹ ಚಿಕಿತ್ಸೆ ಮತ್ತು ಸಲಹೆಯಂತೆ ಚಿಕಿತ್ಸೆ ಪಡೆದು ಉತ್ತಮ ಆರೋಗ್ಯವಂತರಾಗಿರಲು ಸದಾ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ಸಾರ್ವಜನಿಕರಿಗೆ ತಿಳಿಹೇಳಿದರು.
ಪಟ್ಟಣ ಪಂಚಾಯತಿ ಸದಸ್ಯ ಸೈಯದ್ ಅನ್ವರ್ ಮಾತನಾಡಿದರು. ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆಯ ಪದಾಧಿಕಾರಿಗಳ ಸೇವೆಯ ಅನನ್ಯ ನಮ್ಮ ಭಾಗದ ಸಾರ್ವಜನಿಕರಿಗೆ ಚಿಕಿತ್ಸೆ ಪಡೆಯಲು ದೂರದ ಚಿತ್ರದುರ್ಗ ದಾವಣಗೆರೆ ಬೆಂಗಳೂರು ಮಣಿಪಾಲು ದೊಡ್ಡ ದೊಡ್ಡ ನಗರಗಳಿಗೆ ಹೋಗಬೇಕಾಗಿತ್ತು ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ಪದಾಧಿಕಾರಿಗಳು ಇಂತಹ ಉಚಿತ ತಪಾಸಣೆ ಶಿಬಿರ ನಡೆಸುತ್ತಿರುವುದು ತುಂಬಾ ಹೆಮ್ಮೆಯ ಸಂಗತಿ ಎಂದರು.
ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆಯ ಹೋಬಳಿ ಘಟಕ ಅಧ್ಯಕ್ಷ ಕೆ.ಜಿ. ಮಂಜುನಾಥ್ ಜೋಗಿಹಟ್ಟಿ ಮಾತನಾಡಿ ಇಂತಹ ಉಚಿತ ತಪಾಸಣೆ ಶಿಬಿರ ನಮ್ಮ ನಾಯಕನಹಟ್ಟಿ ಹೋಬಳಿಯ ಸಾರ್ವಜನಿಕರಿಗೆ ತುಂಬಾ ಅನುಕೂಲವಾಗುತ್ತದೆ ಸಹಕಾರಿ ನೀಡಿದ ಪ್ರತಿಯೊಬ್ಬರಿಗೆ ಅಭಿನಂದನೆ ತಿಳಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಕೆ.ಪಿ. ತಿಪ್ಪೇಸ್ವಾಮಿ, ಕರವೇ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಸತೀಶ್, ಮಹಿಳಾ ಜಿಲ್ಲಾಧ್ಯಕ್ಷೆ. ರೇಣುಕಾ ರಾಜಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಬಳೇಶ್ ಯಾದವ್, ತಾಲೂಕು ಅಧ್ಯಕ್ಷ ಪಿ. ಮುತ್ತಯ್ಯ ಜಾಗನೂರಹಟ್ಟಿ, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಡಾ. ಅರುಣ ಉಳ್ಳಾರ್ತಿ, ತಾಲೂಕು ನಗರ ಘಟಕ ಅಧ್ಯಕ್ಷ ಸೋಮಣ್ಣ, ತಾಲೂಕು ಕಾರ್ಯದರ್ಶಿ ಸತೀಶ್, ಮಹಿಳಾ ನಗರ ಘಟಕ ಅಧ್ಯಕ್ಷ ಅನುಸೂಯಮ್ಮ, ಮಹಿಳಾ ಉಪಾಧ್ಯಕ್ಷೆ. ಕುಸುಮ, ಮಹಿಳಾ ತಾಲೂಕು ಕಾರ್ಯದರ್ಶಿ ಅರ್ಚನಾ, ನಾಯಕನಹಟ್ಟಿ ಹೋಬಳಿ ಘಟಕ ಉಪಾಧ್ಯಕ್ಷ ಕೆ.ಪಿ. ನಾಗರಾಜ್ ಮಹಿಳಾ ಅಧ್ಯಕ್ಷೆ. ತಿಪ್ಪಕ್ಕ ಚಿನ್ನಮಲ್ಲಯ್ಯ, ನಗರ ಘಟಕ ಅಧ್ಯಕ್ಷ ತಿಪ್ಪೇಸ್ವಾಮಿ, ಗೌರವಾಧ್ಯಕ್ಷ ಸಿ.ಎಸ್. ರಾಘವೇಂದ್ರ, ಕಾರ್ಯದರ್ಶಿ ಬಿ. ಶಿವಮೂರ್ತಿ, ನಗರ ಘಟಕ ಉಪಾಧ್ಯಕ್ಷ ಕೆ.ಎಂ. ಮಂಜುನಾಥ್, ಯುವ ಘಟಕ ಅಧ್ಯಕ್ಷ ಈ ಮಧು. ಸೇರಿದಂತೆ ರೋಗಿಗಳು ಇದ್ದರು,
About The Author
Discover more from JANADHWANI NEWS
Subscribe to get the latest posts sent to your email.