ಚಳ್ಳಕೆರೆ ಜ.30
ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ಇಂತಹ ಶಿಬಿರಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಾಪಂ ಇಒಶಶಿಧರ್ ಕಿವಿ ಮಾತು ಹೇಳಿದರು.
ತಾಲೂಕಿನ ಪಗಡಲಬಂಡೆ ಗ್ರಾಮಪಂಚಾಯಿತಿ.ಬಸವೇಶ್ವರ ಮೆಡಿಕಲ್ ಕಾಲೇಜು ಅಟಸ್ಪತ್ರೆ ಇವರ ಸಹಯೋಗದೊಂದಿಗೆ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಕೆಲಸಗಳ ಒತ್ತಡ. ಆರ್ಥಿಕ ಸಮಸ್ಯೆಯಿಂದ ಕಾಯಿಲೆ ಇದೆ ಎಂದು ಗೊತ್ತಿದ್ದರೂ ಸಹ ಚಿಕಿತ್ಸೆ ಪಡೆಯದೆ ನಿರ್ಲಕ್ಷವಹಿಸಿ ಪ್ರಾಣ ಕಳೆದುಕೊಂಡವರಿದ್ದಾರೆ.
ಬಡವರ ಆರೋಗ್ಯ ತಪಾಸಣೆಗೆ ಸರಕಾರ ವಿವಿಧ ಯೋಜನೆಯಡಿಲ್ಲಿ ಉಚಿತ ಆರೋಗ್ಯ ಸೇವೆ ನೀಡುತ್ತಿದೆ.
ರೋಗಗಳು ಬರುವ ಮನ್ನ ಎಚ್ಚರ ವಹಿಸಿದರೆ ಆಸ್ಪತ್ರೆ ಮತ್ತು ಮಾತ್ರೆಗಳಿಂದ ದೂರವಿರಬಹುದು ಎಂದು ತಿಳಿಸಿದರು. .
ಉಚಿತ ಆರೋಗ್ಯ ಶಿಬಿರದಲ್ಲಿ ಗ್ರಾಪಂ ಅಧ್ಯಕ್ಷ ತಿಮ್ಮರಾಯಪ್ಪ. ಸದಸ್ಯರು ಹಾಗೂ ವೈದ್ಯರು ಉಪಸ್ಥಿತರಿದ್ದರು.









About The Author
Discover more from JANADHWANI NEWS
Subscribe to get the latest posts sent to your email.