ವರದಿ: ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ (ಮೈಸೂರು ಜಿಲ್ಲೆ): : ತಾಲೂಕಿನಲ್ಲಿ ಎಲ್ಲರ ಸಹಕಾರ, ಸಲಹೆ, ಮಾರ್ಗದರ್ಶನದೊಂದಿಗೆ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುವುದು ಎಂದು ತಾಲೂಕು ಪಂಚಾಯಿತಿ ನೂತನ ಇಒ ರವಿಕುಮಾರ್ ಹೇಳಿದರು.
ಅವರು ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರುಗಳಿಂದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದರು.
ತಾಲೂಕಿನಲ್ಲಿ ಯಾವುದೇ ರೀತಿಯ ತಾರತಮ್ಯ ನೀತಿಯನ್ನು ಅನುಸರಿಸದೇ ಕ್ಷೇತ್ರ ವ್ಯಾಪ್ತಿಯಲ್ಲಿ ಸಾರ್ವಜನಿಕರ ಕೆಲಸವನ್ನು ಮಾಡಲಾಗುವುದು. ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಿ ಇದೀಗ ಸ್ವಂತ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಲು ನನಗೆ ಅವಕಾಶ ದೊರಕಿರುವುದು ಸಂತಸ ತಂದಿದೆ. ನಮ್ಮ ವ್ಯಾಪ್ತಿಗೆ ಒಳಪಡುವ ಎಲ್ಲಾ ಇಲಾಖೆಗಳೊಂದಿಗೆ ಸಂಪರ್ಕ ಸಾಧಿಸಿ ಆಯಾಯ ಇಲಾಖೆಗಳಿಂದ ಆಗಬೇಕಾದ ಕೆಲಸ ಕಾರ್ಯಗಳನ್ನು ಮಾಡಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದರು. ಸಾರ್ವಜನಿಕರು, ಜನಪ್ರತಿನಿಧಿಗಳು, ಮುಖಂಡರುಗಳು ಯಾವುದೇ ಸಂದರ್ಭದಲ್ಲಿ ಸಾರ್ವಜನಿಕರ ಕೆಲಸಕ್ಕಾಗಿ ನಮ್ಮನ್ನ ಸಂಪರ್ಕಿಸಿ ಸಮಸ್ಯೆಯ ಬಗ್ಗೆ ಮಾಹಿತಿಯನ್ನು ನೀಡಿ ಸಮಸ್ಯೆಗಳನ್ನು ಪರಿಹರಿಸಲು ನಮ್ಮೊಂದಿಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕರ್ಪೂರವಳ್ಳಿ ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷ ಸಾಲುಕೊಪ್ಪಲು
ಎಸ್.ಎನ್.ರಂಗಸ್ವಾಮಿ ಅವರನ್ನು ಸನ್ಮಾನಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯಶಂಕರ್, ನಗರಾಧ್ಯಕ್ಷ ಪ್ರಭಾಕರ್, ಎಸ್ ಸಿ ಘಟಕದ ಅಧ್ಯಕ್ಷ ಕಂಠಿಕುಮಾರ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಎ.ಟಿ.ಗೋವಿಂದೇಗೌಡ, ನಟರಾಜ್, ಮುಖಂಡರುಗಳಾದ ಅಶ್ವಥ್ ನಾರಾಯಣ, ಬಲರಾಮೇಗೌಡ, ಅರುಣ್ ರಾಜ್, ಗುಣಪಾಲಜೈನ್, ಮಂಜೇಗೌಡ, ಪರೀಕ್ಷಿತ್, ಶಂಕರೇಗೌಡ, ಡಿ.ದೇವರಾಜು ಸಂತೋಷ, ಪುರಿಗೋವಿಂದರಾಜು, ಕಾಂತರಾಜು, ಜವರಯ್ಯ, ಮಹಾಲಿಂಗು, ಮೋಹನ, ಮೂರ್ತಿ, ಮಹದೇವ, ಸುದರ್ಶನ್, ಲೋಕೇಶ್, ವಾಸಿಂಖಾನ್, ಗೋವಿಂದ ಸೇರಿದಂತೆ ಹಲವರು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.