ಚಿತ್ರದುರ್ಗಜ.30:
ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾಲ್ಗೆರೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಕಡತ ಪರಿಶೀಲಿಸಿದರು. ನಂತರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಜಾದ್ ನಗರದ ಚಾಲನೆಯಲ್ಲಿರುವ ಬೂದು ನಿರ್ವಹಣೆ ಕಾಮಗಾರಿ ವೀಕ್ಷಣೆ ಮಾಡಿ, ನರೇಗಾ ಯೋಜನೆಯ ನಿಯಮಾನುಸಾರ ಕಾಮಗಾರಿ ಅನುಷ್ಠಾನಗೊಳಿಸಿ, ಕಾಮಗಾರಿ ಗುಣಮಟ್ಟ ಕಾಪಾಡಿಕೊಳ್ಳಲು ಸೂಚಿಸಿದರು.
ಇಸ್ಸಾಮುದ್ರ ಗ್ರಾಮ ಪಂಚಾಯತಿಗೆ ಧಿಡೀರ್ ಭೇಟಿ ನೀಡಿ, ಗ್ರಾಮ ಪಂಚಾಯಿತಿಯಲ್ಲಿ ಕಂದಾಯ ವಸೂಲಾದ ಬಗ್ಗೆ ಮಾಹಿತಿ ಪಡೆದರು. ನಂತರ ಸಿಬ್ಬಂದಿಗಳ ಹಾಜರಾತಿ ಪರಿಶೀಲಿಸಿ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಕೆಲಸಕ್ಕೆ ಹಾಜರಾಗಿ ಎಲ್ಲಾ ಸಾರ್ವಜನಿಕರೊಂದಿಗೆ ಉತ್ತಮ ಒಡನಾಟದೊಂದಿಗೆ ಯಾವುದೇ ಸಮಸ್ಯೆಗಳು ಬಾರದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಸಿಬ್ಬಂದಿಗಳಿಗೆ ಸೂಚಿಸಿದರು. ಅದೇ ರೀತಿಯಾಗಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕಡತ ಪರಿಶೀಲಿಸಿ, ಎಲ್ಲಾ ಕಡತ ನರೇಗಾ ಮಾರ್ಗಸೂಚಿಯಂತೆ ಮತ್ತು ಚೆಕ್‍ಲಿಸ್ಟ್ ಪ್ರಕಾರ ನಿರ್ವಹಿಸಲು ಸೂಚಿಸಿದರು. ನಂತರ ಅದೇ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಹಾಜರಾತಿ, ಆರೈಕೆ,ಆರೋಗ್ಯ ಗುಣಮಟ್ಟದ ಆಹಾರದ ಬಗ್ಗೆ ಪರಿಶೀಲಿಸಿದರು. ಮಕ್ಕಳ ಹಾಜರಾತಿ ಸರಿಯಾಗಿ ನಿರ್ವಹಿಸುವಂತೆ ಅಂಗನವಾಡಿ ಕಾರ್ಯಕರ್ತರಿಗೆ ಸೂಚಿಸಿದರು.
ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಮಕ್ಕಳ ಹಾಜರಾತಿ, ಮಕ್ಕಳ ವಿದ್ಯಾಭ್ಯಾಸ, ಫಲಿತಾಂಶಗಳ ಬಗ್ಗೆ ಮಾಹಿತಿ ಪಡೆದರು. ಶಿಕ್ಷಕರೊಂದಿಗೆ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಅಡುಗೆ ಕೋಣೆಗೆ ಭೇಟಿ ನೀಡಿ ಆಹಾರದ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿ, ಮಕ್ಕಳೊಂದಿಗೆ ಬಿಸಿಯೂಟ ಸವಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್, ಜಿಲ್ಲಾ ಪಂಚಾಯಿತಿಯ ನರೇಗಾ ಯೋಜನೆಯ ಎಡಿಪಿಸಿ ಮೋಹನ್ ಕುಮಾರ್, ಕಾಲ್ಗೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿಲೀಪ್ ಕುಮಾರ್ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.





About The Author
Discover more from JANADHWANI NEWS
Subscribe to get the latest posts sent to your email.