
ಚಳ್ಳಕೆರೆ ಏ.30
ಮೇ 4 ರಂದು ಶಾಸಕ ಟಿ ರಘುಮೂರ್ತಿ ಇವರ ಅಧ್ಯಕ್ಷತೆಯಲ್ಲಿ ಶ್ರೀ ಭಗೀರಥ ಮಹರ್ಷಿ ಜಯಂತಿ ಕಾರ್ಯಕ್ರಮನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಹಶೀಲ್ದಾರ್ ರೇಹಾನ್ ಪಾಷಾ ಹೇಳಿದರು.
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಉಪ್ಪಾರ ಸಮುದಾಯದ ಸಂಯುಕ್ತಾಶ್ರಯದಲ್ಲಿ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮೇ 4 ರಂದು ಬೆಳಿಗ್ಗೆ 10.30 ಕ್ಕೆ ಸರಿಯಾಗಿ ಶ್ರೀ ಭಗೀರಥ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದ ಸರಳವಾಗಿ ಆಚರಣೆ ಮಾಡಲಾಗುವುದು ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ವಿವಿಧ ಸಾಧಕರಿಗೆ ಸಮ್ಮಾನಿಸಿ ಗೌರವಿಸಲಾಗುವುದು.ಸಂಪನ್ಮೂಲ ವ್ಯಕ್ತಿಗಳಿಂದ ಶ್ರೀ ಭಗೀರಥ ಮಹರ್ಷಿಯವರ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.
ಪೂರ್ವ ಭಾವಿ ಸಭೆಯಲ್ಲಿ ಉಪ್ಪಾರ ಸಮುದಾಯದ ತಾಲೂಕು ಅಧ್ಯಕ್ಷ ಹನುಮಂತಪ್ಪ.ಸಿದ್ದಾಪುರ ಯಲ್ಲಪ್ಪ.ವೆಂಕಟೇಶ್.ರಾಮಾಂಜನಪ್ಪ. ನೀಲಕಂಠಪ್ಪ.ಮುಸ್ಟೂರಲಿಂಗಪ್ಪ.ಡಿ.ಎಂ.ಕೆ.ರವಿಕುಮಾರ್ ಇತರರಿದ್ದರು.





About The Author
Discover more from JANADHWANI NEWS
Subscribe to get the latest posts sent to your email.