April 30, 2026
FB_IMG_1777557649823.jpg

ಹಿರಿಯೂರು:
ನಗರಸಭೆ ವ್ಯಾಪ್ತಿಯ ಸಾರ್ವಜನಿಕರು ಹಾಗೂ ಕಟ್ಟಡ ಮಾಲೀಕರಿಗೆ ಮಹತ್ವದ ಸೂಚನೆ ನೀಡಿರುವ ನಗರಸಭೆ ಪೌರಾಯುಕ್ತರಾದ ಎ. ವಾಸೀಂ ಅವರು, ನಗರದ ಕಟ್ಟಡಗಳ ಮೇಲೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿನ ಯಾವುದೇ ಸ್ಥಳಗಳಲ್ಲಿ ಅನುಮತಿ ಪಡೆಯದೇ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್‌ಗಳನ್ನು ಅಳವಡಿಸುವುದು ಕಾನೂನು ಬಾಹಿರವಾಗಿದೆ ಎಂದು ತಿಳಿಸಿದ್ದಾರೆ.
ಈ ರೀತಿಯ ಅಕ್ರಮ ಅಳವಡಿಕೆಗಳಿಂದ ಗಾಳಿ, ಮಳೆ ಸಂದರ್ಭದಲ್ಲಿ ಅವು ಕೆಳಗೆ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆ ಇದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾಹುತ ಸಂಭವಿಸಿದಲ್ಲಿ ಅದರ ಸಂಪೂರ್ಣ ಜವಾಬ್ದಾರಿ ಸಂಬಂಧಪಟ್ಟ ಕಟ್ಟಡ ಮಾಲೀಕರು ಮತ್ತು ಫ್ಲೆಕ್ಸ್ ಅಳವಡಿಸಿದವರದ್ದೇ ಆಗಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಆದ್ದರಿಂದ, ಈ ಮಾಹಿತಿ ಪ್ರಕಟವಾದ ದಿನದಿಂದ 7 ದಿನಗಳೊಳಗಾಗಿ ನಗರಸಭೆಯಿಂದ ನಿಯಮಾನುಸಾರ ಅನುಮತಿ ಪಡೆದು, ಈಗಾಗಲೇ ಅಳವಡಿಸಿರುವ ಹೋರ್ಡಿಂಗ್‌ಗಳಿಗೆ ಬಾಕಿ ಇರುವ ಶುಲ್ಕವನ್ನು ಪಾವತಿಸಬೇಕು ಎಂದು ಸೂಚಿಸಿದ್ದಾರೆ.
ಇದನ್ನು ಪಾಲಿಸದಿದ್ದಲ್ಲಿ “ಬಹಿರಂಗ ಸ್ಥಳಗಳ ತಡೆಗಟ್ಟುವ ಕಾಯಿದೆ” (Prevention of Disfigurement Act, 1981), ಕರ್ನಾಟಕ ಸರ್ಕಾರದ 2026ರ ಅಧಿಸೂಚನೆ ಹಾಗೂ ಪುರಸಭೆ ಕಾಯ್ದೆ 1964ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ನಿಯಮ ಉಲ್ಲಂಘನೆ ಮಾಡಿದ ಫ್ಲೆಕ್ಸ್, ಬ್ಯಾನರ್ ಮತ್ತು ಹೋರ್ಡಿಂಗ್‌ಗಳನ್ನು ನಗರಸಭೆ ವತಿಯಿಂದ ತೆರವುಗೊಳಿಸಿ, ಸಂಬಂಧಪಟ್ಟವರಿಂದ ದಂಡದೊಂದಿಗೆ ಹಣ ವಸೂಲಿ ಮಾಡಲಾಗುವುದು ಎಂದು ಪೌರಾಯುಕ್ತರು ತಿಳಿಸಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading