May 30, 2026
FB_IMG_1780143458720.jpg

ಚಿತ್ರದುರ್ಗಮೇ.30:
ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು. ಡೆಂಗ್ಯೂ ನಿಯಂತ್ರಣಕ್ಕೆ ಕೇವಲ ಆರೋಗ್ಯ ಇಲಾಖೆ ಮಾತ್ರವಲ್ಲದೆ, ಸಾರ್ವಜನಿಕರು ಮತ್ತು ಎಲ್ಲಾ ವಿವಿಧ ಇಲಾಖೆಗಳು ಒಟ್ಟಾಗಿ ಕೈಜೋಡಿಸಬೇಕು ಎಂದು ಹೊಸದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಘವೇಂದ್ರ ಪ್ರಸಾದ್ ತಿಳಿಸಿದರು.
ಹೊಸದುರ್ಗ ತಾಲ್ಲೂಕಿನ ಬೆಲಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈಚೆಗೆ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಮುದಾಯದ ಸಹಭಾಗಿತ್ವ ಪರಿಶೀಲಿಸಿ, ಸ್ವಚ್ಛಗೊಳಿಸಿ ಹಾಗೂ ಮುಚ್ಚಿಡಿ ಎಂಬ ಘೋಷವಾಕ್ಯದ ಮಹತ್ವ ತಿಳಿಸಿದ ಅವರು, ಡೆಂಗ್ಯೂ ರೋಗದ ಲಕ್ಷಣಗಳು ಹಾಗೂ ಅದನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ವಿವರವಾದ ಮಾಹಿತಿ ನೀಡಿದರು. ವಿವಿಧ ಇಲಾಖೆಗಳ ನಿರಂತರ ಸಹಯೋಗ ಹಾಗೂ ಸಾರ್ವಜನಿಕರ ಜಾಗೃತಿಯಿಂದಾಗಿ ಸದ್ಯ ಡೆಂಗ್ಯೂ ಪ್ರಕರಣಗಳ ಪ್ರಮಾಣ ಇಳಿಕೆಯ ಹಾದಿಯಲ್ಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿಗಳಾದ ಡಾ. ಸಹನಾ, ಡಾ. ಸುಮಾ, ಡಾ. ಕೃಪಾಕರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಲಲಿತಮ್ಮ, ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading