July 31, 2025
IMG-20250730-WA0213.jpg

ಮೊಳಕಾಲ್ಮುರು : ಹಲವು ವರ್ಷಗಳಿಂದ ಬರಗಾಲದಿಂದ ತತ್ತರಿಸಿರುವ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರವು ಬಡತನ ರೇಖೆಗಿಂತ ಕೆಳಗಿದ್ದು ಪ್ರತಿಯೊಬ್ಬ ವಿದ್ಯಾರ್ಥಿಯು ಬಡತನದಿಂದ ಮುಕ್ತಿ ಹೊಂದಲು ಶಿಕ್ಷಣವೇ ಪರಿಹಾರ ಎಂದು ಎತ್ತಿನಹಟ್ಟಿಗೌಡ್ರು ಅಭಿಮಾನಿ ಬಳಗದ ಕಾರ್ಯದರ್ಶಿ ಜಿ.ಟಿ.ದೇವರಾಜ್ ಹೇಳಿದರು.
ಮೊಳಕಾಲ್ಮುರು ತಾಲ್ಲೂಕು ದೇವಸಮುದ್ರ ಹೋಬಳಿ ಜೀರಳ್ಳಿ(ರಾಮಸಾಗರ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 212 ವಿದ್ಯಾರ್ಥಿಗಳಿಗೆ ಬುಧವಾರ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಶಾಲೆಗಳಲ್ಲಿ ಬೋಧನೆ ಮಾಡಲು ಗುಣಮಟ್ಟದ ಶಿಕ್ಷಕರಿದ್ದಾರೆ. ಆದರೆ ಮಕ್ಕಳಿಗೆ ಕಲಿಕೆಗೆ ಬೇಕಾದ ಅಗತ್ಯ ಕಲಿಕಾ ಸಾಮಗ್ರಿಗಳ ಕೊರತೆ ಇದೆ. ಇದನ್ನು ಮನಗಂಡು ವಿದ್ಯಾರ್ಥಿಗಳಿಗೆ ಅಗತ್ಯವಾಗಿ ಬೇಕಾಗಿರುವ ಕಲಿಕಾ ಸಾಮಗ್ರಿಗಳನ್ನು ನೀಡುವ ಕೈಂಕರ್ಯವನ್ನು ತೊಡಲಾಗಿದೆ. ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹತ್ತಾರು ವರ್ಷಗಳ ಕಾಲ ಬರಗಾಲ ಆವರಿಸಿ ಇಲ್ಲಿನ ಜನಜೀವನ ಸಂಕಷ್ಟದಿಂದ ನಡೆಯುತ್ತಿದೆ ಈ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳಿಗೆ ಯಾವುದೇ ರೀತಿಯ ಕಲಿಕೆಯ ಪ್ರಕ್ರಿಯೆಗೆ ಅಡ್ಡಿಯಾಗಬಾರದು ಎಂದು ಅವರಿಗೆ ಅಗತ್ಯವಾಗಿ ಬೇಕಾಗಿರುವ ಕಲಿಕಾ ಸಾಮರ್ಥ್ಯಗಳನ್ನು ವಿತರಿಸಲಾಗುತ್ತಿದೆ. ಈ ಕಲಿಕಾ ಸಾಮಗ್ರಿಗಳನ್ನು ಸಮರ್ಪಕವಾಗಿ ಬಳಸಿಕೊಂಡು ವಿದ್ಯಾರ್ಥಿಗಳು ಉತ್ತಮವಾದ ಶಿಕ್ಷಣವನ್ನು ಪಡೆದು ಜೀವನದಲ್ಲಿ ಬಹುದೊಡ್ಡ ವ್ಯಕ್ತಿಗಳಾಗಿ ಸಾಧನೆ ಮಾಡಬೇಕು. ಆ ಮೂಲಕ ಸಮಾಜಕ್ಕೆ ಕೊಡುಗೆಯನ್ನು ನೀಡಬೇಕು ಇದೆಲ್ಲದಕ್ಕೂ ಮೂಲ ಕಾರಣವೇ ಶಿಕ್ಷಣ. ಇಂತಹ ಗುಣಮಟ್ಟದ ಶಿಕ್ಷಣವನ್ನು ಪಡೆದು ಎಲ್ಲಾ ವಿದ್ಯಾರ್ಥಿಗಳು ಸಮಾಜಮುಖಿ ಚಿಂತನೆಗಳನ್ನು ಅಳವಡಿಸಿಕೊಂಡು ಯಶಸ್ವಿಯಾಗಬೇಕು ಎಂದು ಕಾರ್ಯಕ್ರಮದಲ್ಲಿದ್ದ ಎಲ್ಲ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಅಶೋಕ‌ ಸಿದ್ದಾಪುರ ಗ್ರಾಮಪಂಚಾಯಿತಿ ಅಧ್ಯಕ್ಷ ಹೂಲಪ್ಪ, ಲಿಂಗರಾಜ್ ದೇವಸಮುದ್ರ, ಮುಖ್ಯಶಿಕ್ಷಕ ಪ್ರದೀಪ್ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading