
ಚಿತ್ರದುರ್ಗಜುಲೈ30:
ಐತಿಹಾಸಿಕ ಕೋಟೆ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ರೂ.2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಬುಧವಾರ ಲೋಕಾರ್ಪಣೆಗೊಳಿಸಿದರು.
ಕೋಟೆ ಮುಂಭಾಗದ ಮಯೂರ ಹೋಟೆಲ್ ಪಕ್ಕದಲ್ಲಿ 2018-19ನೇ ಸಾಲಿನ ಬಂಡವಾಳ ವೆಚ್ಚ ಯೋಜನೆಯಡಿ ಪ್ರವಾಸಿ ಮಾಹಿತಿ ಕೇಂದ್ರ, ಪಾರ್ಕಿಂಗ್ ಸೌಲಭ್ಯ, ಲಗೇಜ್ ಕೊಠಡಿ, ಕುಡಿಯುವ ನೀರಿನ ಸೌಲಭ್ಯ, ಪ್ರವಾಸಿಗರಿಗೆ ವಿಶ್ರಾಂತಿ ಕೊಠಡಿ, ಮಹಿಳಾ ಮತ್ತು ಪುರುಷ ಸ್ನಾನಗೃಹ ಹಾಗೂ ಶೌಚಾಲಯಗಳನ್ನು ನಿರ್ಮಿಸಲಾಗಿದೆ.
ಈ ವೇಳೆ ಮಾತನಾಡಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಪ್ರವಾಸೋದ್ಯಮ ಇಲಾಖೆಯಿಂದ ಕಾಮಗಾರಿಗಳು ಪೂರ್ಣಗೊಂಡು ಬಹಳ ದಿನಗಳು ಆಗಿದ್ದವು. ಕೆಲ ದಿನಗಳ ಹಿಂದೆ ಇಲ್ಲಿ ವೀಕ್ಷಣೆಗೆ ಆಗಮಿಸಿದ ವೇಳೆ, ಕಟ್ಟಡಗಳು ಪೂರ್ಣಗೊಂಡಿದ್ದು ಕಂಡು ಬಂದಿತು. ಶೀಘ್ರವೇ ಉದ್ಘಾಟನೆ ನೆರವೇರಿಸಿ ಬರುವ ಪ್ರವಾಸಗರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೆ, ಅದರಂತೆ ಇಂದು ಪ್ರವಾಸಿ ಮಾಹಿತಿ ಕೇಂದ್ರ, ಪಾರ್ಕಿಂಗ್ ಸೌಲಭ್ಯ, ಲಗೇಜ್ ಕೊಠಡಿ, ಕುಡಿಯುವ ನೀರಿನ ಸೌಲಭ್ಯ, ಪ್ರವಾಸಿಗರಿಗೆ ವಿಶ್ರಾಂತಿ ಕೊಠಡಿ, ಶೌಚಾಲಯ ಹಾಗೂ ಸ್ನಾನ ಗೃಹಗಳನ್ನು ಲೋಕಾರ್ಪಣೆಗೊಳಿಸಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗಿದೆ. ಈ ಎಲ್ಲಾ ಸೌಲಭ್ಯಗಳು ಒಂದೇ ಆವರಣದ ಒಳಗಡೆ ಇದ್ದು, ರಕ್ಷಣೆಗಾಗಿ ಸುತ್ತಲೂ ಕಾಂಪೌಂಡ್ ನಿರ್ಮಿಸಲಾಗಿದೆ. ಐತಿಹಾಸಿಕ ಕೋಟೆ ವೀಕ್ಷಣೆಗೆ ಸಂಜೆಯವರೆಗೆ ಮಾತ್ರ ಅವಕಾಶವಿದ್ದು ಪ್ರವಾಸಿಗರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಪೌರಾಯುಕ್ತೆ ಎಂ.ರೇಣುಕಾ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಡಾ.ನಾಗವೇಣಿ, ಕೆಆರ್‍ಐಡಿಎಲ್ ಕಾರ್ಯಪಾಲಕ ಅಭಿಯಂತರ ಟಿ.ಎನ್.ವಿನಾಯಕ ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.



About The Author
Discover more from JANADHWANI NEWS
Subscribe to get the latest posts sent to your email.