September 14, 2025
1756559423163.jpg


ಚಿತ್ರದುರ್ಗಆಗಸ್ಟ್.30:
ಆಯುಷ್ ಇಲಾಖೆ ಯೋಗ ತರಬೇತುದಾರರು ಸಾಧ್ಯವಾದಷ್ಟು ಗ್ರಾಮದ ಮನೆಗಳ ಸಮೀಕ್ಷೆ ನಡೆಸಿ ಕುಟುಂಬದ ಪ್ರತಿಯೊಬ್ಬರ ಆರೋಗ್ಯ ಸ್ಥಿತಿಯನ್ನು ಅರಿತು ರೋಗಕ್ಕೆ ಅನುಗುಣವಾಗಿ ಯೋಗಾಸನ-ಪ್ರಾಣಾಯಾಮಗಳನ್ನು ಕಲಿಸಿ ಔಷಧ ಮುಕ್ತ ಮತ್ತು ರೋಗ ಮುಕ್ತ ಗ್ರಾಮಗಳನ್ನಾಗಿ ಮಾಡುವ ಜವಾಬ್ದಾರಿ ವಹಿಸಬೇಕಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ ಎಸ್ ನಾಗಸಮುದ್ರ ತಿಳಿಸಿದ್ದಾರೆ.
ನಗರದ ಜಿಲ್ಲಾ ಆಯುಷ್ ಕಚೇರಿಯಲ್ಲಿ ಶುಕ್ರವಾರ ಯೋಗ ತರಬೇತುದಾರರಿಗಾಗಿ ಏರ್ಪಡಿಸಿದ್ದ ಆರೋಗ್ಯ ಸಮೀಕ್ಷಾ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
“ದೀರ್ಘಕಾಲದ ಕಾಯಿಲೆಗಳಾದ ಮಧುಮೇಹ, ಸಂಧಿವಾತ ಮತ್ತು ರಕ್ತದೊತ್ತಡ ನಿರ್ವಹಣೆಯಲ್ಲಿ ಆಯುಷ್ ಪದ್ಧತಿಯ ಚಿಕಿತ್ಸೆ ಹಾಗೂ ಯೋಗಾಸನ ಪ್ರಾಣಾಯಾಮಗಳು ಪರಿಣಾಮಕಾರಿ ಎಂದು ಸಾಬೀತಾಗಿದೆ.ಅವುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಆಯುಷ್ ಇಲಾಖೆಯ ಪ್ರತಿಯೊಬ್ಬರ ಜವಾಬ್ಧಾರಿಯಾಗಿದ್ದು, ಈ ನಿಟ್ಟಿನಲ್ಲಿ ಚಿತ್ರದುರ್ಗ ಕ್ಷೇತ್ರ ವ್ಯಾಪ್ತಿಯಲ್ಲಿ ಉತ್ತಮ ಸೇವೆಯ ಪರಿಣಾಮವಾಗಿ ಚಿತ್ರದುರ್ಗ ತಾಲ್ಲೂಕಿನ ಜೆ.ಎನ್.ಕೋಟೆ ಆಯುಷ್ ಆರೋಗ್ಯ ಮಂದಿರವನ್ನು ಸರ್ಕಾರ ಆಯುಷ್ ಗ್ರಾಮವನ್ನಾಗಿ ಘೋಷಿಸಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು.
ರೋಗಮುಕ್ತ ಗ್ರಾಮಕ್ಕಾಗಿ ಆಯುಷ್ ಗ್ರಾಮ ಯೋಜನೆ: ಇದೇ ಸಂಧರ್ಭದಲ್ಲಿ ಆರೋಗ್ಯ ಸಮೀಕ್ಷೆಯ ತರಬೇತಿಯನ್ನು ನೀಡಿ ಮಾತನಾಡಿದ ಜಿಲ್ಲಾ ಆಯುಷ್ ಇಲಾಖೆಯ ಸಂಪನ್ಮೂಲ ವ್ಯಕ್ತಿಗಳಾದ ಡಾ.ಶಿವಕುಮಾರ್ ಟಿ ಅವರು ಆಯುಷ್ ಗ್ರಾಮ ಎಂಬುದು ಭಾರತ ಸರ್ಕಾರದ ಸಚಿವಾಲಯವಾದ ಆಯುಷ್ ಸಚಿವಾಲಯದ ಒಂದು ಕಾರ್ಯಕ್ರಮವಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಆಯುರ್ವೇದ, ಯೋಗ, ಪ್ರಕೃತಿ ಚಿಕಿತ್ಸೆ, ಯುನಾನಿ, ಸಿದ್ಧ, ಸೋವಾ-ರಿಗ್ಪಾ, ಮತ್ತು ಹೋಮಿಯೋಪತಿ ಮುಂತಾದ ಸಾಂಪ್ರದಾಯಿಕ ಆರೋಗ್ಯ ಪದ್ಧತಿಗಳನ್ನು ಪೆÇ್ರೀತ್ಸಾಹಿಸಲು ಮತ್ತು ಉತ್ತೇಜಿಸಲು ಇದನ್ನು ಸ್ಥಾಪಿಸಲಾಗಿದೆ. ಈ ಕಾರ್ಯಕ್ರಮದ ಮುಖ್ಯ ಉದ್ದೇಶವೆಂದರೆ ಗ್ರಾಮೀಣ ಭಾಗದ ಜನರು ಆಯುಷ್-ಆಧಾರಿತ ಜೀವನಶೈಲಿಯನ್ನು ಅಳವಡಿಸಿಕೊಂಡು, ಆರೋಗ್ಯ ರಕ್ಷಣೆಯಲ್ಲಿ ಈ ಸಾಂಪ್ರದಾಯಿಕ ವಿಧಾನಗಳನ್ನು ಬಳಸುವುದಕ್ಕೆ ಒತ್ತು ನೀಡುವುದಕ್ಕಾಗಿ ಮೊದಲು ಜನರ ಆರೋಗ್ಯ ಸ್ಥಿತಿಯನ್ನು ಅರಿತುಕೊಳ್ಳುವುದು ಅವಶ್ಯಕವಾಗಿದೆ ಅದಕ್ಕಾಗಿ ಆಯುಷ್ ಆರೋಗ್ಯ ಮಂದಿರಗಳ ವ್ಯಾಪ್ತಿಯ ಪ್ರತಿಯೊಂದು ಮನೆಗಳನ್ನು ಸಮೀಕ್ಷೆ ಮಾಡುವ ಉದ್ದೇಶದಿಂದ ಈ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಉದ್ದೇಶ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಹಾಯಕ ಆಡಳಿತಾಧಿಕಾರಿ ವಿಶ್ವನಾಥ್ ಹಿರೇಮಠ್ , ಜಿಲ್ಲೆಯ ಎಲ್ಲಾ ಆಯುಷ್ ಆರೋಗ್ಯ ಮಂದಿರಗಳ ಯೋಗ ತರಬೇತುದಾರರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತಿ ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading