October 30, 2026
IMG-20261030-WA0395



ಚಿತ್ರದುರ್ಗ:
ರಂಗಭೂಮಿ ಕ್ಷೇತ್ರದಲ್ಲಿ ಸುದೀರ್ಘ ಹಾಗೂ ಗಣನೀಯ ಸೇವೆ ಸಲ್ಲಿಸಿರುವ ಚಿತ್ರದುರ್ಗ ಜಿಲ್ಲೆಯ ಹಿರಿಯ ರಂಗಕಲಾವಿದ ಜಿ.ಡಿ. ತಿಮ್ಮಯ್ಯ ಅವರಿಗೆ 2026ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹರಿಯಬ್ಬೆ ಗ್ರಾಮದ ಗಿರೇ ತಿಮ್ಮಯ್ಯ ಹಾಗೂ ತಿಮ್ಮಕ್ಕ ದಂಪತಿಯ ಪುತ್ರರಾದ ಜಿ.ಡಿ. ತಿಮ್ಮಯ್ಯ (87) ಅವರು, ಲೋಯರ್ ಸೆಕೆಂಡರಿ ಶಿಕ್ಷಣವನ್ನು ಪೂರ್ಣಗೊಳಿಸಿದ್ದು, ಏಕನಾಥೇಶ್ವರಿ ಸಂಗೀತ ಶಾಲೆಯಲ್ಲಿ ಕಲಾ ಶಿಕ್ಷಣವನ್ನು ಪಡೆದಿದ್ದಾರೆ.
ಕಲೆಯನ್ನೇ ತಮ್ಮ ಬದುಕಿನ ಅವಿಭಾಜ್ಯ ಅಂಗವಾಗಿಸಿಕೊಂಡಿರುವ ಇವರು, ಹರಿಯಬ್ಬೆ ಶಾಂತಲಾ ಕಲಾ ಸಂಘದ ಅಧ್ಯಕ್ಷರಾಗಿ ಹಾಗೂ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟದ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಅಭಿನಯ, ಗಾಯನ, ಜಾನಪದ ಗೀತೆಗಳ ಗಾಯನ, ಹಾರ್ಮೋನಿಯಂ ವಾದನ, ನಾಟಕ ನಿರ್ದೇಶನ, ಸಾಹಿತ್ಯ ರಚನೆ ಹಾಗೂ ರಾಗ ಸಂಯೋಜನೆ ಸೇರಿದಂತೆ ರಂಗಭೂಮಿಯ ವಿವಿಧ ಪ್ರಕಾರಗಳಲ್ಲಿ ಅಪಾರ ಪರಿಣತಿ ಹೊಂದಿದ್ದಾರೆ. ತಮ್ಮ ಕಲಾ ಸೇವೆಯ ಮೂಲಕ ಅನೇಕ ನಾಟಕ ಪ್ರದರ್ಶನಗಳಲ್ಲಿ ಗುರುತಿಸಿಕೊಂಡಿರುವ ಇವರು, ಈಗಾಗಲೇ ಹಲವು ಪ್ರಶಸ್ತಿ ಹಾಗೂ ಗೌರವಗಳಿಗೆ ಭಾಜನರಾಗಿದ್ದಾರೆ.
ರಂಗಭೂಮಿ ಕ್ಷೇತ್ರಕ್ಕೆ ಸಲ್ಲಿಸಿದ ದೀರ್ಘಕಾಲದ ಸೇವೆ ಮತ್ತು ಕಲಾ ಸಾಧನೆಯನ್ನು ಗುರುತಿಸಿ ರಾಜ್ಯ ಸರ್ಕಾರ 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಜಿಲ್ಲೆಯ ಕಲಾವಿದರಿಗೆ ಹಾಗೂ ಕಲಾಭಿಮಾನಿಗಳಿಗೆ ಸಂತಸ ತಂದಿದೆ.
87ನೇ ವಯಸ್ಸಿನಲ್ಲಿಯೂ ಕಲಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಜಿ.ಡಿ. ತಿಮ್ಮಯ್ಯ ಅವರಿಗೆ ಪ್ರಶಸ್ತಿ ಲಭಿಸಿರುವುದಕ್ಕೆ ಜಿಲ್ಲೆಯಾದ್ಯಂತ ಅಭಿನಂದನೆಗಳು ವ್ಯಕ್ತವಾಗಿವೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading